




ಕಡಬ ಟೈಮ್ಸ್ (KADABA TIMES): ಕಡಬ ಪೇಟೆಯ ಹೃದಯಭಾಗದಲ್ಲಿರುವ ಪ್ರವಾಸಿ ಬಂಗಲೆ ಶಿಥಿಲಗೊಂಡಿದ್ದು ಇದನ್ನು ತೆರವುಗೊಳಿಸಿ ಹಳೆ ಸ್ಟೇಶನ್ ಬಳಿ ಲೋಕೋಪಯೋಗಿ ಇಲಾಖೆಗೆ ಕಾದಿರಿಸಿರುವ ಜಮೀನಿನಲ್ಲಿ ನೂತನ ಪ್ರವಾಸಿ ಬಂಗಲೆನಿರ್ಮಾಣಕ್ಕೆ ಸಿದ್ಧತೆ ನಡೆಯುತ್ತಿದೆ.
ಹಳೆಯ ಪ್ರವಾಸಿ ಬಂಗಲೆಯನ್ನು ದುರಸ್ತಿಗೊಳಿಸುವ ಸಲುವಾಗಿ ಪರಿಶೀ ಲನೆಗೆ ಆಗಮಿಸಿದ್ದ ಜಿ.ಪಂ. ಅಧಿಕಾರಿಗಳು ಕಟ್ಟಡ ದುರಸ್ತಿಗೆ ಯೋಗ್ಯವಾಗಿಲ್ಲ ಎಂದು ವರದಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಕಟ್ಟಡವನ್ನು ತೆರವುಗೊಳಿಸಲು ನಿರ್ಧರಿಸಲಾಗಿದೆ. ಈ ಕುರಿತು ಅಧಿಕೃತ ಆದೇಶ ಇನ್ನಷ್ಟೇ ಬರಬೇಕಿದೆ ಎಂದು ಜಿ.ಪಂ.ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಭರತ್ ಬಿ.ಎಂ. ಅವರು ಮಾಹಿತಿ ನೀಡಿದ್ದಾರೆ.

ಮೂಲತಃ ಸರಕಾರಿ ಸಮುದಾಯ ಆಸ್ಪತ್ರೆಗೆ ಸೇರಿದ ಈ ಜಮೀನನ್ನು ಮತ್ತೆ ಆಸ್ಪತ್ರೆಯ ಉಪಯೋಗಕ್ಕೆ ನೀಡಬೇಕೆಂದು ಈ ಹಿಂದೆ ಜಿಲ್ಲಾ ಆರೋಗ್ಯಾಧಿಕಾರಿಯವರ ಮುಖಾಂತರ ಜಿ.ಪಂ.ಗೆ ಮನವಿ ಸಲ್ಲಿಸಲಾಗಿದೆ. ಮುಂದೆ ಸಮುದಾಯ ಆಸ್ಪತ್ರೆಯು ತಾ| ಆಸ್ಪತ್ರೆಯಾಗಿ ಉನ್ನತೀ ಕರಣ ವಾಗ ಬೇಕಿರುವುದರಿಂದ ಹೆಚ್ಚಿನ ಜಾಗದ ಅಗತ್ಯವಿರುವುದರಿಂದ ಸಂಬಂಧ ಪಟ್ಟವರು ಈ ಕುರಿತು ಅಗತ್ಯ ಕ್ರಮ ಕೈಗೊಳ್ಳಬೇಕಿದೆ.
ಈ ಬಗ್ಗೆ ಸುಳ್ಯ ಶಾಸಕ ಎಸ್ ಅಂಗಾರ ಪ್ರತಿಕ್ರಿಯೆ ನೀಡಿ ಲೋಕೋಪಯೋಗಿ ಇಲಾಖೆಗೆ ಗುರುತಿಸಲಾದ ಜಮೀನಿನಲ್ಲಿ ನಿರೀಕ್ಷಣ ಮಂದಿರ ನಿರ್ಮಿಸಲಾಗುತ್ತಿದೆಕಟ್ಟಡದ ವಿನ್ಯಾಸ ನಕ್ಷೆ ಸಿದ್ಧಪಡಿಸಲಾಗಿದ್ದು, ಶೀಘ್ರ ಅನುದಾನಕ್ಕಾಗಿ ಅಂದಾಜುಪಟ್ಟಿ ಸಲ್ಲಿಸಲಾಗುವುದು. ಸುಳ್ಯ ಹಾಗೂ ಕಡಬದಲ್ಲಿ ನೂತನ ನಿರೀಕ್ಷಣ ಮಂದಿರ ನಿರ್ಮಾಣದ ಬಗ್ಗೆ ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ಅವರ ಜತೆ ಮಾತುಕತೆ ನಡೆಸಲಾಗಿದ್ದು, ಶೀಘ್ರ ಅನುದಾನ ಬಿಡುಗಡೆಯಾಗಲಿದೆ ಎಂದಿದ್ದಾರೆ.