




ಕಡಬ ಟೈಮ್ಸ್ (KADABA TIMES):ಬಿಜೆಪಿಯ ದ.ಕ ಜಿಲ್ಲಾ ಪ್ರಶಿಕ್ಷಣ ಪ್ರಕೋಷ್ಠದ ಸಂಚಾಲಕರಾಗಿ ಬಿಜೆಪಿ ಮುಖಂಡ ಕೃಷ್ಣ ಶೆಟ್ಟಿ ನೇಮಕಗೊಂಡಿದ್ದಾರೆ.
ಕಳೆದ ವಿಧಾನ ಸಭಾ ಚುನಾವಣಾ ಸಂದರ್ಭದಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಚುನಾವಣಾ ಪ್ರಭಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ.

ಕಡಬ ಕ್ಷೇತ್ರದ ಜಿ.ಪಂ ಸದಸ್ಯರಾಗಿ,ಪುತ್ತೂರು ಎಪಿಎಂಸಿ ಅಧ್ಯಕ್ಷರಾಗಿ,ಜಿಲ್ಲಾ ಬಿಜೆಪಿ ಸಮಿತಿಯ ಸದಸ್ಯರಾಗಿ ಪಕ್ಷದಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದರು.