




ಕಡಬ ಟೈಮ್ಸ್ (KADABA TIMES):ಕೇಡರ್‌ಗಳೇ ಲೀಡರ್‌ಗಳಾಗುವ ದೇಶದ ಏಕೈಕ ಪಕ್ಷ ಬಿಜೆಪಿ. ನನ್ನಂತಹ ಸಾಮಾನ್ಯ ಕಾರ್ಯಕರ್ತನಿಗೆ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಂತಹ ಹುದ್ದೆ ಸಿಕ್ಕಿರುವುದು ರೋಮಾಂಚನ ಉಂಟು ಮಾಡುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.
ಮೈಸೂರಿನಲ್ಲಿ ಖಾಸಗಿ ಹೋಟೆಲ್ ನಲ್ಲಿ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿ ಪ್ರಪಂಚಕ್ಕೆ ಮಾದರಿ ಎನ್ನುವಂತಹ ಆಡಳಿತ ಕೊಡುತ್ತಿದ್ದಾರೆ.

ಕಿಸಾನ್ ಸಮ್ಮಾನ್, ಕಾರ್ಮಿಕರ ಪರಿಹಾರ, ವಸತಿ ಯೋಜನೆ, ಪಿಂಚಣಿ, ಸಬ್ಸಿಡಿ ಎಲ್ಲವನ್ನೂ ನೇರವಾಗಿ ಫಲಾನುಭವಿಗಳಿಗೆ ತಲುಪಿಸುತ್ತಿದ್ದೇವೆ. ಇದು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಸಾಧನೆ ಎಂದರು.