




ಕಡಬ ಟೈಮ್ಸ್ (KADABA TIMES):ಲಾಡ್ಜ್ ಒಂದರಲ್ಲಿ ಯುವಕ ಮತ್ತು ಯುವತಿ ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ಸುಳ್ಯ ನಗರದಲ್ಲಿ ಸೋಮವಾರ ನಡೆದಿದೆ.
ಆತ್ಮಹತ್ಯೆಗೆ ಶರಣಾದ ಯುವಕನನ್ನು ಐವರ್ನಾಡಿನ ಕಟ್ಟತ್ತಾರು ತಿಮ್ಮಪ್ಪ ಗೌಡರ ಪುತ್ರ ದರ್ಶನ್ ಮತ್ತು ಯುವತಿ ಬೆಳ್ತಂಗಡಿ ನಿವಾಸಿ ಎಂದು ತಿಳಿದು ಬಂದಿದೆ.

ಇವರ ಇಬ್ಬರ ಮೃತದೇಹಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಸುಳ್ಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.