ಸುಬ್ರಹ್ಮಣ್ಯ: ಕುಕ್ಕೆ ದೇಗುಲದಲ್ಲಿ ಅವ್ಯವಹಾರದ ಆರೋಪ | ಭ್ರಷ್ಟಾಚಾರ ನಿಗ್ರಹದಳಕ್ಕೆ ದೂರು ಸಲ್ಲಿಕೆ

ಸುಬ್ರಹ್ಮಣ್ಯ: ಕುಕ್ಕೆ ದೇಗುಲದಲ್ಲಿ ಅವ್ಯವಹಾರದ ಆರೋಪ | ಭ್ರಷ್ಟಾಚಾರ ನಿಗ್ರಹದಳಕ್ಕೆ ದೂರು ಸಲ್ಲಿಕೆ

Kadaba Times News
0

ಕಡಬ ಟೈಮ್ಸ್ (KADABA TIMES):ರಾಜ್ಯದ ನಂಬರ್ ವನ್ ದೇಗುಲ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ    ದೇವಸ್ಥಾನದ ಆಡಳಿತ ಮಂಡಳಿಯ ಮೇಲೆ ದೇವಾಲಯದ ಆಭರಣಗಳನ್ನು ಅವ್ಯವಹಾರ ನಡೆಸಿರುವ ಆರೋಪ ಕೇಳಿಬಂದಿದೆ.

ದೇಗುಲದ  ಆಡಳಿತಾಧಿಕಾರಿ ಶ್ರೀಮತಿ ರೂಪಾ ಎಂ.ಜೆ ಮತ್ತು   ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಯಾಗಿದ್ದ  ರವೀಂದ್ರ ಎಂ.ಎಚ್  ಅವರ ಮೇಲೆ ಸುಬ್ರಹ್ಮಣ್ಯದ ನಿವಾಸಿ  ಶ್ರೀನಾಥ್ ಟಿ.ಎಸ್. ಅವರು ಮಂಗಳೂರಿನ ಪಶ್ಚಿಮ ವಲಯ ಭ್ರಷ್ಟಾಚಾರ ನಿಗ್ರಹದಳದ ಪೋಲಿಸ್ ಅಧೀಕ್ಷಕರಿಗೆ ದೂರು ದಾಖಲಿಸಿದ್ದು, ತನಿಖೆ ನಡೆಸುವಂತೆ ಕೋರಿದ್ದಾರೆ.

ಕುಕ್ಕೆ ದೇವಸ್ಥಾನದ ಅಧಿಕೃತ ದಾಖಲಾತಿ ಪುಸ್ತಕದಲ್ಲಿ ದಾಖಲಾಗಿರುವ ಕೋಟ್ಯಂತರ  ರೂಪಾಯಿ ಬೆಲೆಬಾಳುವ ವಜ್ರದ ಕಂಠಿಹಾರ, ಆಭರಣಗಳು, ಶ್ರೀ ಸತ್ಯನಾರಾಯಣ ದೇವರ ಫೋಟೋ , ಬೆಳ್ಳಿಯ ಒಡವೆಗಳು,  ಪುರಾತನ ಕಾಲದ ವಿಗ್ರಹಗಳು ನಾಪತ್ತೆಯಾಗಿದ್ದು  ಈ ಬಗ್ಗೆ ದೇವಾಲಯದ ಮಾಜಿ ವ್ಯವಸ್ಥಾಪನಾ ಸಮಿತಿಯ ಸದಸ್ಯ  ಮೋನಪ್ಪ ಮಾನಾಡು ಅವರು 22/10/2019 ರಂದೇ ದೇವಾಲಯದ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಯಾಗಿದ್ದ  ರವೀಂದ್ರ ಎಂ.ಎಚ್ ಅವರಿಗೆ  ಮಾಹಿತಿ ಕೋರಿ ಅರ್ಜಿ ಸಲ್ಲಿಸಿದರೂ  ಈ ಬಗ್ಗೆ ಯಾವುದೇ ಮಾಹಿತಿಯನ್ನು ಆಡಳಿತ ಮಂಡಳಿ ನೀಡಿಲ್ಲ ಎನ್ನಲಾಗಿದೆ.

ಈ ವಿಚಾರವಾಗಿ 01/08/2020 ರಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಸಮಿತಿಯ ನಿರ್ದೇಶಕರಾಗಿರುವ ಶ್ರೀನಾಥ್ ಟಿ.ಎಸ್ ಅವರು ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದ್ದರೂ ಇಲ್ಲಿಯವರೆಗೂ ಆಡಳಿತಾಧಿಕಾರಿಯಾಗಲಿ, ಕಾರ್ಯ ನಿರ್ವಹಣಾಧಿಕಾರಿಯೇ ಆಗಲಿ ಯಾವುದೇ ಮಾಹಿತಿ ನೀಡಿಲ್ಲ ಎಂದು ದೂರಲಾಗಿದೆ.  ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅರ್ಜಿದಾರರು ಆಗ್ರಹಿಸಿದ್ದಾರೆ.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top