




ಕಡಬ ಟೈಮ್ಸ್ (KADABA TIMES):ಕೊರೋನ ಸಮಯದಲ್ಲೂ ದೇಶದಲ್ಲಿ ಶೇಕಡಾ 40ಕ್ಕಿಂತಲು ಹೆಚ್ಚು ರಾಸಾಯನಿಕ ಗೊಬ್ಬರಗಳ ಮಾರಾಟವಾಗಿದ್ದು, ಜನರು ಕೃಷಿಯತ್ತ ಹೆಚ್ಚಿನ ಒಲವು ತೋರಿಸುತ್ತಿದ್ದಾರೆ ಎಂದು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ಸಚಿವರಾದ ಡಿ ವಿ ಸದಾನಂದಗೌಡ ಹೇಳಿದ್ದಾರೆ.
ಬೆಂಗಳೂರಿನ ಯಲಹಂಕದಲ್ಲಿ ವಸತಿ ಸಮುಚ್ಚಯವೊಂದರ ಭೂಮಿಪೂಜೆಯಲ್ಲಿ ಪಾಲ್ಗೊಂಡು ಮಾತನಾಡಿದ ಸದಾನಂದ ಗೌಡರುಕೇಂದ್ರಲ್ಲಿ ನರೇಂದ್ರ ಮೋದಿ ಹಾಗೂ ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಸರ್ಕಾರ ಅತ್ಯುತ್ತಮ ಕೆಲಸದಲ್ಲಿ ತೊಡಗಿಕೊಂಡಿದೆ. ಭಾರತೀಯ ಜನತಾ ಪಕ್ಷ ಕೆಲಸ ಮಾಡಿ ವೋಟ್ ಕೇಳುವ ಪಕ್ಷವಾಗಿದ್ದು. ರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾವಣೆಯಲ್ಲಿ ನಮಗೆ ಗೆಲವು ಶತಸಿದ್ದ ಎಂದು ಡಿವಿಎಸ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ

ಕೋವಿಡ್ ಸಮಯದಲ್ಲೂ 500 ಫ್ಲಾಟ್‌ಗಳ ನಿರ್ಮಾಣಕ್ಕೆ ಈ ಸಂಸ್ಥೆ ಮುಂದಾಗಿರುವುದು ಬಹಳ ಅದ್ಭುತ ಕಾರ್ಯವೇ ಸರಿ. ಇಂತಹ ಯೋಜನೆಗಳಿಂದಲೇ ಬೆಂಗಳೂರು ನಗರದಲ್ಲಿ ಉದ್ಯೋಗಾವಕಾಶ ಹೆಚ್ಚುವ ಮೂಲಕ ರಾಜ್ಯ ಹಾಗೂ ದೇಶದ ಆರ್ಥಿಕತೆಗೆ ಉತ್ತೇಜನ ದೊರಕಲಿದೆ್ ಎಂದಿದ್ದಾರೆ.