




ಕಡಬ ಟೈಮ್ಸ್ (KADABA TIMES):ಸುಳ್ಯ ಮಂಡಲ ಬಿಜೆಪಿಯ ವಿಶೇಷ ಕಾರ್ಯಕಾರಿಣಿ ಸಭೆಯು ಸುಳ್ಯದ ಅಂಬಟೆಡ್ಕದ ಶ್ರೀ ಶ್ರೀನಿವಾಸ ಪದ್ಮಾವತಿ ಸಭಾಂಗಣದಲ್ಲಿ ಅ.26( ಸೋಮವಾರ) ನಡೆದಿದೆ.
ಕಾರ್ಯಕಾರಿಣಿ ಸಭೆಯನ್ನು ಶಾಸಕ ಎಸ್. ಅಂಗಾರ ದೀಪಬೆಳಗಿಸಿ ಉದ್ಘಾಟಿಸಿ ಬಳಿಕ ಮಾತನಾಡಿ ಮುಂದಿನ ಗ್ರಾಮ ಪಂಚಾಯತಿ ಚುನಾವಣೆಗೆ ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇನ್ನಷ್ಟು ಗಟ್ಟಿಯಾಗಿ ಪಕ್ಷ ಸಂಘಟನೆಗೊಳಿಸುವಂತೆ ಕಾರ್ಯಕರ್ತರಿಗೆ ಸೂಚಿಸಿದರು.

ಮಂಡಲ ಸಮಿತಿಯ ಅಧ್ಯಕ್ಷ ಹರೀಶ್ ಕಂಜಿಪಿಲಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ್, ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಲಂಬೆ, ಜಿಲ್ಲಾ ಕಾರ್ಯದರ್ಶಿ ಮುಳಿಯ ಕೇಶವ ಭಟ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರುಗಳು