




ಕಡಬ ಟೈಮ್ಸ್ (KADABA TIMES):ನವೆಂಬರ್ ತಿಂಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಚುನಾವಣಾ ಆಯೋಗ ಹೈಕೋರ್ಟ್ ಗೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಅವಧಿ ಪೂರ್ಣಗೊಂಡಿರುವ ಗ್ರಾಮಪಂಚಾಯಿತಿಗಳಿಗೆ ಶೀಘ್ರ ಚುನಾವಣೆ ನಡೆಸಲು ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ನಿರ್ದೇಶಿಸುವಂತೆ ಕೋರಿ ವಿಧಾನಪರಿಷತ್ ಸದಸ್ಯ ಕೆ.ಸಿ. ಕೊಂಡಯ್ಯ ಮತ್ತಿತರರು ಸಲ್ಲಿಸಿರುವ ಪಿಐಎಲ್ ವಿಚಾರಣೆ ನಡೆಸಿದ ಸಿಜೆ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠಕ್ಕೆ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್. ಫಣೀಂದ್ರ ಈ ಮಾಹಿತಿ ನೀಡಿದರು.

ಚುನಾವಣಾ ಆಯೋಗ ಈಗಾಗಲೇ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದೆ. ಬಹುತೇಕ ಜಿಲ್ಲಾಧಿಕಾರಿಗಳು ಚುನಾವಣೆ ನಡೆಸಬಹುದು ಎಂಬ ನಿಲುವು ತಿಳಿಸಿದ್ದಾರೆ.ಒಂದು ತಾಲೂಕಿನಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಸಲು ಯೋಜಿಸಲಾಗಿದೆ ಎಂದು ಆಯೋಗದ ಪರ ನ್ಯಾಯಪೀಠಕ್ಕೆ ತಿಳಿಸಿದರು.