




ಕಡಬ ಟೈಮ್ಸ್ (KADABA TIMES):ನೆಲ್ಯಾಡಿ ಸಮೀಪದ ರಾಷ್ಟ್ರೀಯ ಹೆದ್ದಾರಿ 75ರ ಮಣ್ಣಗುಂಡಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ತರಕಾರಿ ಸಾಗಾಟದ ವಾಹನವೊಂದು ರಸ್ತೆ ಪಕ್ಕದಲ್ಲಿ ಉರುಳಿ ಬಿದ್ದಿರುವ ಘಟನೆ ಗುರುವಾರ ಮುಂಜಾನೆ ನಡೆದಿದೆ.
ಹಾಸನ ಮೂಲದ ತರಕಾರಿ ಸಾಗಾಟದ ವಾಹನ ಇಂದು ಬೆಳಗಿನ ಜಾವ ಪುತ್ತೂರಿಗೆ ತೆರಳುತ್ತಿದ್ದು, ಈ ವೇಳೆ ರಸ್ತೆಯಲ್ಲಿ ಇರುವ ಬೃಹತ್ ಗುಂಡಿಗಳನ್ನು ತಪ್ಪಿಸಲು ಹೋಗಿ ಈ ದುರ್ಘಟನೆ ನಡೆದಿದೆ ಎಂಬುದಾಗಿ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.

ಘಟನೆಯಲ್ಲಿ ಅದೃಷ್ಟವಶಾತ್ ಚಾಲಕ ಹಾಗೂ ನಿರ್ವಾಹಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.