ಐತ್ತೂರು: ಕುಡಿಯುವ ನೀರಿನ ಪೈಪ್ ಲೈನ್ ಒಡೆದು ಭಾರೀ ಪ್ರಮಾಣದ ನೀರು ಪೋಲು

ಐತ್ತೂರು: ಕುಡಿಯುವ ನೀರಿನ ಪೈಪ್ ಲೈನ್ ಒಡೆದು ಭಾರೀ ಪ್ರಮಾಣದ ನೀರು ಪೋಲು

Kadaba Times News
0

ಕಡಬ ಟೈಮ್ಸ್ (KADABA TIMES):ಕಡಬ ತಾಲೂಕಿನ ಐತ್ತೂರು ಗ್ರಾ.ಪಂ ವ್ಯಾಪ್ತಿಯ ಮರ್ದಾಳ -ಕರ್ಮಾಯಿ ರಸ್ತೆಯಲ್ಲಿ ಕುಡಿಯುವ ನೀರಿನ ಪೈಪ್ ಮಾರ್ಗ ಮಧ್ಯೆ ಒಡೆದು ಹೋಗಿದ್ದು, ಪ್ರತಿದಿನ ರಸ್ತೆ ಪಕ್ಕದಲ್ಲಿ ನೀರು ಹರಿದು ಪೋಲಾಗುತ್ತಿದೆ.

ಶಿವಾಜಿನಗರಕ್ಕೆ ಈ ನೀರು ಸರಬರಾಜು ಆಗುತ್ತಿದ್ದು ಎರಡು ತಿಂಗಳಿನಿಂದ ಕುಡಿಯುವ ನೀರು ರಸ್ತೆಯಲ್ಲಿಯೇ ನಿರಂತವಾಗಿ ನೀರು ಅಧಿಕ ಪ್ರಮಾಣದಲ್ಲಿ ಹರಿಯುತ್ತಿದೆ. ಗ್ರಾ.ಪಂ ಅಧಿಕಾರಿಗಳ ಗಮನಕ್ಕೆ ತಂದರೂ ಸರಿಪಡಿಸುವ ಕೆಲಸಕ್ಕೆ ಮುಂದಾಗಿಲ್ಲ ಎಂದು ಆ ಭಾಗದ ಗ್ರಾಮಸ್ಥರು ಆರೋಪಿಸಿದ್ದಾರೆ. ಅಲ್ಲದೆ ಶೀಘ್ರ ದುರಸ್ತಿಪಡಿಸಬೇಕೆಂದು ಒತ್ತಾಯಿಸಿದ್ದಾರೆ.

ಈ ಬಗ್ಗೆ ಕಡಬ ಟೈಮ್ಸ್ ವೆಬ್ ಸೈಟ್ ಆಡಳಿತಾಧಿಕಾರಿ ಹೊನ್ನಪ್ಪ ಗೌಡ ಅವರನ್ನು ಸಂಪರ್ಕಿಸಿದ್ದು ನನ್ನ ಗಮನಕ್ಕೆ ಈಗಷ್ಟೇ ಬಂದಿದೆ. ಈ ಬಗ್ಗೆ ತ್ವರಿತವಾಗಿ ಕ್ರಮಕೈಗೊಂಡು ಸಮಸ್ಯೆ ಬಗೆಹರಿಸಲಾಗುವುದು ಎಂದಿದ್ದಾರೆ.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top