




ಕಡಬ ಟೈಮ್ಸ್ (KADABA TIMES):ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನಪರ ಯೋಜನೆಗಳು ಜನಸಾಮಾನ್ಯರಿಗೂ ತಲುಪಿದ ಹಿನ್ನೆಲೆಯಲ್ಲಿ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ ಎಂದು ಬಿಜೆಪಿ ದ.ಕ ಜಿಲ್ಲಾ ಪ್ರಶಿಕ್ಷಣ ಪ್ರಕೋಷ್ಠದ ಸಂಚಾಲಕ ಕೃಷ್ಣ ಶೆಟ್ಟಿ ಕಡಬ ಹೇಳಿದ್ದಾರೆ.
ಉಪಚುನಾವಣೆಯಲ್ಲಿ ಬಿಜೆಪಿ ಜಯ ಸಾಧಿಸಿದ ಕುರಿತ “ಕಡಬ ಟೈಮ್ಸ್ “ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಅವರು ರಾಷ್ಟ್ರದಲ್ಲಿ ಬಿಜೆಪಿ ಪರವಾದ ಅಲೆಯಿದೆ. ನರೇಂದ್ರ ಮೋದಿ ಆಡಳಿತದ ಸಾಧನೆಗಳು ಜನರನ್ನು ತಲುಪಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರ ನೇತೃತ್ವದ ನಾಯಕತ್ವದಲ್ಲಿ ಎಲ್ಲರೂ ಒಗ್ಗೂಡಿ ಹೋರಾಡಿದ ಪರಿಣಾಮ ಈ ಗೆಲುವು ಬಂದಿದೆ,ಕಾರ್ಯಕರ್ತರ ಶ್ರಮವೂ ಇದರಲ್ಲಿದೆ.

ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಮುಂದಿನ ಗ್ರಾ.ಪಂ ಚುನಾವಣೆ, ಪಟ್ಟಣ ಪಂಚಾಯತ್ ಚುನಾವಣೆಯಲ್ಲೂ ಎಲ್ಲಾ ಕಡೆ ಬಿಜಿಪಿ ಗೆಲ್ಲುವ ವಿಶ್ವಾಸವಿದೆ ಎಂದರು.
್