




ಕಡಬ ಟೈಮ್ಸ್ (KADABA TIMES):ಕೋಡಿಂಬಾಳ ಗ್ರಾಮದ ಮಡ್ಯಡ್ಕ ಗುಂಡಿಮಜಲ್ ನಿವಾಸಿ ಬೇಬಿ( 63 ವ) ಅವರು ಬುಧವಾರ ಸಂಜೆ ನಿಧನರಾಗಿದ್ದಾರೆ.
ಹಲವು ಸಮಯದಿಂದ ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದ ಇವರಿಗೆ ಎದೆ ನೋವು ಕಾಣಿಸಿಕೊಂಡಿತ್ತು.ಕೂಡಲೇ ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕೊಂಡೊಯ್ಯುವ ವೇಳೆ ಮೃತಪಟ್ಟಿದ್ದಾರೆ.

ಮೃತರ ಅಂತ್ಯಕ್ರಿಯೆ ಗುರುವಾರ ಮುಂಜಾನೆ ಕೋಡಿಂಬಾಳ ಚರ್ಚ್ ನಲ್ಲಿ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.ಮೃತರು ಪತ್ನಿರೋಸಮ್ಮ, ಪತ್ರಕರ್ತ ಪ್ರಕಾಶ್, ಪ್ರಸಾದ್,ಸೊಸೆಯಂದಿರು,ಮೊಮ್ಮಕ್ಕಳನ್ನು ಅಗಲಿದ್ದಾರೆ.