




ಕಡಬ ಟೈಮ್ಸ್ (KADABA TIMES):ಕಡಬ: ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕಡಬ ತಾಲೂಕು ಪಂಚಾಯತ್ ಗೆ ಅನುದಾನ ಬಿಡುಗಡೆಗೊಳಿಸುವಂತೆ ತಾ.ಪಂ. ಅಧ್ಯಕ್ಷರ ನೇತೃತ್ವದಲ್ಲಿ ಜಿಲ್ಲಾ ಉಸ್ತುವರಿ ಸಚಿವರಿಗೆ ನ.10ರಂದು ಕಡಬ ತಾ.ಪಂ. ಅಧ್ಯಕ್ಷರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಗಿದೆ.
ತಾ.ಪಂ. ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ ಅವರು ನ.10 ರಂದು ಮಂಗಳೂರಿಗೆ ಆಗಮಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಹೊಸದಾಗಿ ರಚನೆಗೊಂಡಿರುವ ಕಡಬ ತಾಲೂಕು ಪಂಚಾಯತ್ ಅಭಿವೃದ್ದಿಗೊಳಿಸುವ ನಿಟ್ಟಿನಲ್ಲಿ ಅನುದಾನದ ಕೊರತೆ ಇದ್ದು, ಕೂಡಲೇ 2 ಕೋಟಿ ಅನುದಾನವನ್ನು ಬಿಡುಗಡೆಗೊಳಿಸಬೇಕೆಂದು ಮನವಿಯಲ್ಲಿ ವಿನಂತಿಸಲಾಗಿದೆ.

ಈ ಸಂದರ್ಭದಲ್ಲಿ ತಾ.ಪಂ. ಉಪಾಧ್ಯಕ್ಷೆ ಜಯಂತಿ ಆರ್. ಗೌಡ, ಸುಭದಾ ಎಸ್,ರೈ, ಸ್ಥಾಯಿ ಸಮಿತಿ ಅಧ್ಯಕ್ಷೆ ಪಿ.ವೈ. ಕುಸುಮಾ ಅವರು ಉಪಸ್ಥಿತರಿದ್ದರು.