




ಕಡಬ ಟೈಮ್ಸ್(KADABA TIMES):ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯರ್ವರಿಗೆ ಯುವಕನೋರ್ವ ಚೂರಿಯಿಂದ ಇರಿದು ಪರಾರಿಯಾಗಿರುವ ಘಟನೆ ನೆಟ್ಲ ಮುಡ್ನೂರು ಗ್ರಾಮದ ನೇರಳಕಟ್ಟೆ ಜಂಕ್ಷನ್ ನಲ್ಲಿ ನಡೆದಿದೆ.
ಅನಂತಾಡಿ ದೇವಿನಗರ ನಿವಾಸಿ ಶಕುಂತಲಾ ಎಂಬವರು ಗಂಭೀರ ಗಾಯಗೊಂಡಿರುವುದಾಗಿ ತಿಳಿದುಬಂದಿದೆ.

ಗಂಭೀರ ಗಾಯಗೊಂಡ ಮಹಿಳೆಯನ್ನು ಸ್ಥಳೀಯರು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.ಗಾಯಾಳು ಮಹಿಳೆ ವಿವಾಹಿತರಾಗಿದ್ದು, ಆಸ್ತಿ ವಿಚಾರಕ್ಕೆ ಸಂಬಂಧಿಸಿ ಈ ಘಟನೆ ನಡೆದಿದೆ ಎನ್ನಲಾಗಿದೆ.
ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಆಗಮಿಸಿ ಮಾಹಿತಿ ಸಂಗ್ರಹಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಿದೆ.