ಪಿಯುಸಿ ಫಲಿತಾಂಶ ಪ್ರಕಟ|ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ

ಪಿಯುಸಿ ಫಲಿತಾಂಶ ಪ್ರಕಟ|ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ

Kadaba Times News

ಕಡಬ ಟೈಮ್ಸ್(KADABA TIMES):ಕರ್ನಾಟಕ ಪಿಯು ಬೋರ್ಡ್‌ 2021-22ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆ(ಶೇ.88.02) ಮೊದಲ ಸ್ಥಾನ ಪಡೆದುಕೊಂಡಿದೆ. ಉಡುಪಿ 2ನೇ ಸ್ಥಾನ ಪಡೆದುಕೊಂಡಿದ್ದು,

ವಿಜಯಪುರ 3ನೇ ಸ್ಥಾನ, ಬೆಂಗಳೂರು ದಕ್ಷಿಣ 4ನೇ ಸ್ಥಾನ, ಉತ್ತರ ಕನ್ನಡ 5ನೇ ಸ್ಥಾನ, ಚಿತ್ರದುರ್ಗ ಜಿಲ್ಲೆ (ಶೇ.49.31) ಕೊನೆಯ ಸ್ಥಾನ ಪಡೆದುಕೊಂಡಿದೆ.

ಕಳೆದ ಎಪ್ರಿಲ್ 23 ರಿಂದ ಮೇ 18ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಾಗಿ ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದರು.

ಈ ಪೈಕಿ 3,46,936 ಬಾಲಕರು ಹಾಗೂ 3,37,319 ಬಾಲಕಿಯರು ದಾಖಲಾಗಿದ್ದರು. ರಾಜ್ಯಾದ್ಯಂತ ಒಟ್ಟು 1,076 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು.

ಕಲಾ ವಿಭಾಗಕ್ಕೆ 2,28,167 ಮಂದಿ, ವಾಣಿಜ್ಯ ವಿಭಾಗಕ್ಕೆ 2,45,519 ಮಂದಿ ಮತ್ತು ವಿಜ್ಞಾನ ವಿಭಾಗದಲ್ಲಿ 2,10,569 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top