




ಕಡಬ ಟೈಮ್ಸ್(KADABA TIMES):ಪ್ರೀತಿಸಿದ ಯುವತಿ ಮದುವೆಯಾಗಲು ನಿರಾಕರಿಸಿದ ಕಾರಣಕ್ಕೆ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಚಾಮುಂಡೇಶ್ವರಿ ಲೇಔಟ್‌ನಲ್ಲಿ ನಡೆದಿದೆ.
ಚರಣ್ (25) ಆತ್ಮಹತ್ಯೆಗೆ ಶರಣಾದ ಯುವಕ. ತನ್ನ ಜೊತೆಗೆ ಕೆಲಸ ಮಾಡುತ್ತಿದ್ದ ಯುವತಿಯನ್ನು ಚರಣ್ ಪ್ರೀತಿಸುತ್ತಿದ್ದನು.ಇಬ್ಬರೂ ಮದುವೆಯಾಗಲು ನಿರ್ಧರಿಸಿದ್ದರು ಎನ್ನಲಾಗಿದೆ.

ನಂತರದ ಬೆಳವಣಿಗೆಯಲ್ಲಿ ಧರ್ಮಸ್ಥಳದಲ್ಲಿ ವಿವಾಹವಾಗಲು ಸಿದ್ಧತೆ ನಡೆಸಿದ್ದು ಅಂತಿಮ ಕ್ಷಣದಲ್ಲಿ ಆಕೆ ಮದುವೆಯಾಗಲು ನಿರಾಕರಿಸಿದ್ದಳು. ಈ ಹಿನ್ನೆಲೆ ನೊಂದ ಯುವಕ ಮನೆಗೆ ಬಂದು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಈತನ ಸಹೋದರಿಯರಿಬ್ಬರು ಕೂಡಾ ಪ್ರೀತಿಯ ವಿಚಾರವಾಗಿ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದರು. ಇದೀಗ ಚರಣ್ ಕೂಡಾ ಅಂತಹುದೇ ನಿರ್ಧಾರದಿಂದ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ವಿದ್ಯಾರಣ್ಯಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.