ಕಡಬ: ವಿದ್ಯಾರ್ಥಿಗಳಿಬ್ಬರಿಗೆ ಕಪಾಲಮೋಕ್ಷ ಆರೋಪ|ಆಸ್ಪತ್ರೆ ಸೇರಿದ ವಿದ್ಯಾರ್ಥಿಗಳು,ಶಿಕ್ಷಕನ ವಿರುದ್ದ ಕ್ರಮಕ್ಕೆ ಆಗ್ರಹ

ಕಡಬ: ವಿದ್ಯಾರ್ಥಿಗಳಿಬ್ಬರಿಗೆ ಕಪಾಲಮೋಕ್ಷ ಆರೋಪ|ಆಸ್ಪತ್ರೆ ಸೇರಿದ ವಿದ್ಯಾರ್ಥಿಗಳು,ಶಿಕ್ಷಕನ ವಿರುದ್ದ ಕ್ರಮಕ್ಕೆ ಆಗ್ರಹ

Kadaba Times News

ಕಡಬ ಟೈಮ್ಸ್(KADABA TIMES):ಕಡಬ: ಶಾಲೆಯ ಶಿಕ್ಷಕರೋರ್ವರು ಥಳಿಸಿದ್ದಾರೆ ಎಂದು ಆರೋಪಿಸಿ ಇಬ್ಬರು ವಿದ್ಯಾರ್ಥಿಗಳು ಕಡಬ ಸಮುದಾಯ ಆಸ್ಪತ್ರೆಗೆ ದಾಖಲಾದ ಘಟನೆ ಶುಕ್ರವಾರದಂದು ನಡೆದಿದೆ.

ಕಡಬ ಸರ್ಕಾರಿ ಪ್ರೌಢಶಾಲೆಯ
ಎಂಟನೇ ತರಗತಿ ವಿದ್ಯಾರ್ಥಿಗಳಾದ ಸುದೀಶ್ ಮತ್ತು ದಿಗಂತ್ ಎಂಬಿಬ್ಬರು ಆಸ್ಪತ್ರೆಗೆ ದಾಖಲಾದವರು.

ಇವರಿಗೆ ಈ ಶಾಲೆಯ ಶಿಕ್ಷಕ ಖಾದರ್ ಎಂಬವರು ಕೆನ್ನೆಗೆ ಥಳಿಸಿದ್ದರಿಂದ ವಿದ್ಯಾರ್ಥಿಗಳ ಕೆನ್ನೆ ಊದಿಕೊಂಡಿದ್ದು, ಅಸ್ವಸ್ಥರಾಗಿದ್ದಾರೆ ಎನ್ನಲಾಗಿದೆ. ಇದೀಗ ಶಿಕ್ಷಕರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ವಿದ್ಯಾರ್ಥಿಗಳ ಪೋಷಕರು ಕ್ಷೇತ್ರ ಶಿಕ್ಷಣಾಧಿಕಾರಿಯವರಿಗೆ ಆಗ್ರಹಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಉಪ ಪ್ರಾಂಶುಪಾಲೆ ವೇದಾವತಿಯವರು, ನಾನು ವಿದ್ಯಾರ್ಥಿಗಳನ್ನು ಭೇಟಿಯಾಗಿ ವಿಚಾರಿಸಿದ್ದು  ಆರೋಗ್ಯವಾಗಿದ್ದಾರೆ. ಈ ಬಗ್ಗೆ  ವಿಚಾರಿಸುವುದಾಗಿ ತಿಳಿಸಿದ್ದಾರೆ.

 

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top