




ಕಡಬ ಟೈಮ್ಸ್(KADABA TIMES):ಸುಳ್ಯ ತಾಲೂಕಿನಲ್ಲಿ ಮತ್ತೆ ಇಂದು ಭೂಮಿ ಕಂಪಿಸಿದ್ದು ಜನತೆ ಆತಂಕಕ್ಕೆ ಒಳಗಾಗಿದ್ದಾರೆ.
ಎರಡು ದಿನಗಳ ಹಿಂದೆ ಇಲ್ಲಿ ಭೂಕಂಪನ ಸಂಭವಿಸಿತ್ತು. ಮೊನ್ನೆಗಿಂತ ಇಂದಿನ ಭೂಕಂಪನದ ಅನುಭವ ತೀವ್ರವಾಗಿತ್ತು ಎಂದು ಸ್ಥಳೀಯರು ತಮ್ಮ ಅನುಭವ ಹಂಚಿಕೊಂಡಿದ್ದಾರೆ.
ಮಂಗಳವಾರ ಬೆಳಿಗ್ಗೆ 7.44 ರಿಂದ 7.45 ರ ಹೊತ್ತಿಗೆ ಲಘುವಾಗಿ ಭೂಮಿ ಕಂಪಿಸಿದೆ. ಭಾರೀ ವಿಚಿತ್ರ ಶಬ್ದದೊಂದಿಗೆ ಕೆಲವು ಸೆಕೆಂಡ್‌ಗಳ ಕಾಲ ಭೂಮಿ ಕಂಪಿಸಿದೆ ಎನ್ನಲಾಗಿದೆ.
ಜನರು ಆತಂಕದಲ್ಲಿ ಮನೆಯಿಂದ ಹೊರ ಬಂದಿದ್ದಾರೆ. ಪಾತ್ರೆಗಳು, ಪೀಠೋಪಕರಣಗಳು ಅಲುಗಾಡಿವೆ. ಇದೇ ವೇಳೆ ಮರಗಳು ಉರುಳಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ .

ಸುಳ್ಯ, ಸಂಪಾಜೆ, ಗೂನಡ್ಕ, ಗುತ್ತಿಗಾರು ಮತ್ತಿತರ ವಿವಿಧ ಭಾಗಗಳಲ್ಲಿ ಭೂಮಿ ಕಂಪಿಸಿರುವ ಬಗ್ಗೆ ಜನರು ತಿಳಿಸಿದ್ದಾರೆ.
10 ಕೀ.ಮಿ ಆಳದಲ್ಲಿ ಭೂಕಂಪನ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಇದನ್ನು ಭೂಕಂಪನ ವಿಪತ್ತು ನಿರ್ವಹಣಾ ದಳ ಧೃಡಪಡಿಸಬೇಕಾಗಿದೆ.
ಮಡಿಕೇರಿ, ನಾಪೋಕ್ಲು ಕುಕ್ಕುಂದ ಕಾಡು, ಬಲ್ಲಮಾವಟ್ಟಿ. ದಬ್ಬಡ್ಕ, ಪೆರಾಜೆ, ಕರಿಕೆ, ಭಾಗಮಂಡಲ, ಮದೆನಾಡು ಸೇರಿದಂತೆ ವಿವಿಧೆಡೆ ಭೂಮಿ ಕಂಪಿಸಿದ ಅನುಭವವಾಗಿರುವುದಾಗಿ ಸಾರ್ವಜನಿಕರು ತಿಳಿಸಿದ್ದಾರೆ.