ಬೀಚ್ ಬಳಿ ಅಸ್ವಸ್ಥಗೊಂಡು ಚಿಕಿತ್ಸೆ ಫಲಿಸದೆ ಯುವಕ ಸಾವು: ಪರಿಚಯಸ್ಥರು ಠಾಣೆಯನ್ನು ಸಂಪರ್ಕಿಸುವಂತೆ ಮನವಿ

ಬೀಚ್ ಬಳಿ ಅಸ್ವಸ್ಥಗೊಂಡು ಚಿಕಿತ್ಸೆ ಫಲಿಸದೆ ಯುವಕ ಸಾವು: ಪರಿಚಯಸ್ಥರು ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Kadaba Times News

ಕಡಬ ಟೈಮ್ಸ್(KADABA TIMES):ಮಂಗಳೂರು ನಗರದ ಮುಕ್ಕ ಬೀಚ್ ಬಳಿ ಅಪರಿಚಿತ ವ್ಯಕ್ತಿಯೊಬ್ಬರು (30)  ಅಸ್ವಸ್ಥವಾಗಿ ಬಿದ್ದು ಚಿಕಿಸ್ತೆ ಫಲಿಸದೆ ಮೃತಪಟ್ಟಿದ್ದಾರೆ.

ಚಿಕಿತ್ಸೆಗಾಗಿ ಅವನನ್ನು ಸಾರ್ವಜನಿಕರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದರೂ  ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎಣ್ಣೆ ಕಪ್ಪು ಮೈಬಣ್ಣ, ಧೃಡಕಾಯ ಶರೀರ, ಗುಂಗುರು ಗಡ್ಡ ಹೊಂದಿರುವ ಇವರು ನೀಲಿ ಬಣ್ಣದ ಟೀ ಶರ್ಟ್ ಮತ್ತು ನೀಲಿ ಪ್ಯಾಂಟ್ ಧರಿಸಿರುತ್ತಾನೆ.  ಈ ವ್ಯಕ್ತಿಯ ಕುಟುಂಬಸ್ಥರು ಹಾಗೂ ಪರಿಚಯಸ್ಥರು ಇದ್ದಲ್ಲಿ ಸುರತ್ಕಲ್ ಪೊಲೀಸ್ ಠಾಣೆಯ ದೂ.ಸಂ:0824-2220540, ಮೊ.ಸಂಖ್ಯೆ: 9480805360, 9480802345, ಕಂಟ್ರೋಲ್ ರೂಂ.ನಂ:0824-2220800 ಅಥವಾ ಸುರತ್ಕಲ್ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಸುರತ್ಕಲ್ ಪೊಲೀಸ್ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top