ರಸ್ತೆ ಬದಿ ನಿಲ್ಲಿಸಿದ್ದ ಕಲ್ಲು ಸಾಗಾಟದ ಲಾರಿ ಪಲ್ಟಿ

ರಸ್ತೆ ಬದಿ ನಿಲ್ಲಿಸಿದ್ದ ಕಲ್ಲು ಸಾಗಾಟದ ಲಾರಿ ಪಲ್ಟಿ

Kadaba Times News

ಕಡಬ ಟೈಮ್ಸ್(KADABA TIMES):ರಸ್ತೆ ಬದಿ ನಿಲ್ಲಿಸಿದ್ದ ಕಲ್ಲು ಸಾಗಾಟದ ಲಾರಿಯೊಂದು ಮಗುಚಿ ಬಿದ್ದ ಘಟನೆ ವಿಟ್ಲ – ಕಾಸರಗೋಡು ರಸ್ತೆಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ನಡೆದಿದೆ.

ಕಲ್ಲು ತುಂಬಿದ್ದ ಲಾರಿಯನ್ನು ರಸ್ತೆಯ ಬದಿ ನಿಲ್ಲಿಸಿ ಚಾಲಕ ಹೊಟೇಲ್ ಗೆ  ತೆರಳಿದ ವೇಳೆ ಈ ಘಟನೆ ನಡೆದಿದೆ.

ಅಪಘಾತದಿಂದಾಗಿ ಯಾವುದೇ ಅಪಾಯ ಸಂಭವಿಸಿಲ್ಲ.ರಸ್ತೆಬದಿಯ ಮಣ್ಣು ಸಡಿಲಗೊಂಡಿದ್ದು, ಇದೇ ಜಾಗದಲ್ಲಿ ಕಲ್ಲು ತುಂಬಿದ ಲಾರಿ ನಿಂತ ಹಿನ್ನೆಲೆಯಲ್ಲಿ ಮಣ್ಣು ಕುಸಿದು, ಲಾರಿ ಮಗುಚಿ ಬಿದ್ದಿದೆ ಎನ್ನಲಾಗಿದೆ‌.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top