ಕೊನೆಗೂ ಲೋಕಾಯುಕ್ತರನ್ನು ನೇಮಕ ಮಾಡಿದ ರಾಜ್ಯ ಸರ್ಕಾರ

ಕೊನೆಗೂ ಲೋಕಾಯುಕ್ತರನ್ನು ನೇಮಕ ಮಾಡಿದ ರಾಜ್ಯ ಸರ್ಕಾರ

Kadaba Times News

ಕಡಬ ಟೈಮ್ಸ್(KADABA TIMES):ರಾಜ್ಯ ಸರ್ಕಾರ ಕೊನೆಗೂ ಲೋಕಾಯುಕ್ತರನ್ನು ನೇಮಕ ಮಾಡಿದ್ದು, ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ,  ಹಾಲಿ ಉಪ ಲೋಕಾಯುಕ್ತ ಭೀಮನಗೌಡ ಸಂಗನಗೌಡ ಪಾಟೀಲ್‌ ಅವರು ನೂತನ ಲೋಕಾಯುಕ್ತರಾಗಿ ನೇಮಕಗೊಂಡಿದ್ದಾರೆ.

ಪಾಟೀಲ್‌ ಅವರನ್ನು ಲೋಕಾಯುಕ್ತರನ್ನಾಗಿ ನೇಮಕ ಮಾಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಡಿದ್ದ ಶಿಫಾರಸಿಗೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರು ಇಂದು ಅಂಕಿತ ಹಾಕಿದ್ದಾರೆ.

ಈ ಹಿಂದೆ ಲೋಕಾಯುಕ್ತರಾಗಿದ್ದ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ ಅವರು 2022ರ ಜನವರಿ 27ರಂದು ನಿವೃತ್ತರಾಗಿದ್ದರು.ಅಂದಿನಿಂದ ಈ ಹುದ್ದೆ ಖಾಲಿ ಇತ್ತು.

ಬಿಎಸ್ ಪಾಟೀಲ್ ಅವರು 2019ರ ನವೆಂಬರ್‌ನಿಂದ ಉಪ ಲೋಕಾಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಾಳೆ ಬೆಳಗ್ಗೆ ರಾಜಭವನದಲ್ಲಿ ನೂತನ ಲೋಕಾಯುಕ್ತರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top