ಕಡಬ:ಚುಟುಕು ಸಾಹಿತ್ಯ ಪರಿಷತ್ತು ತಾಲೂಕು ಅಧ್ಯಕ್ಷರಾಗಿ ವಿ.ಕೆ.ಕಡಬ ನೇಮಕ

ಕಡಬ:ಚುಟುಕು ಸಾಹಿತ್ಯ ಪರಿಷತ್ತು ತಾಲೂಕು ಅಧ್ಯಕ್ಷರಾಗಿ ವಿ.ಕೆ.ಕಡಬ ನೇಮಕ

Kadaba Times News

ಕಡಬ ಟೈಮ್ಸ್(KADABA TIMES):ಮೈಸೂರಿನಲ್ಲಿ ಕೇಂದ್ರ ಕಚೇರಿ ಹೊಂದಿರುವ ಚುಟುಕು ಸಾಹಿತ್ಯ ಪರಿಷತ್ತಿನ ಕಡಬ ತಾಲೂಕು ನೂತನ ಅಧ್ಯಕ್ಷರನ್ನಾಗಿ  ವಿ.ಕೆ ಕಡಬ ಅವರು ನೇಮಕಗೊಂಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಹರೀಶ ಸುಲಾಯ ಒಡ್ಡಂಬೆಟ್ಟು ಇವರನ್ನು ನೇಮಕ ಮಾಡಿದ್ದಾರೆ. ಪ್ರಸ್ತುತ ಇವರು ಎಸ್.ಡಿ.ಎಂ ಕಾಲೇಜು ಪತ್ರಿಕೋದ್ಯಮ ವಿಭಾಗದ ಸಮುದಾಯ ಬಾನುಲಿ ಕೇಂದ್ರದ ಕಾರ್ಯಕ್ರಮ ಸಂಯೋಜಕರಾಗಿದ್ದಾರೆ.

ಕನ್ನಡ ಮತ್ತು ತುಳು ಭಾಷೆಯಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ಕೃಷಿ ಮಾಡುತ್ತಿರುವ ಇವರು   ಹಲವು ಕವಿಗೋಷ್ಠಿಯಲ್ಲಿ ಭಾಗವಹಿಸಿದ್ದಾರೆ. ಮಂಗಳೂರು ಆಕಾಶವಾಣಿಯ ಲ್ಲಿ ತುಳು ವಿಭಾಗದಲ್ಲಿ ಕಾರ್ಯಕ್ರಮ ನಿರ್ಮಾಣ ಸಹಾಯಕನಾಗಿ ಸೇವೆ ಸಲ್ಲಿಸಿದ್ದಾರೆ. ಬಳಿಕ ಸಂತ ಅಲೋಶಿಯಸ್ ಕಾಲೇಜು ಅಧೀನದ ರೇಡಿಯೋ ಸಾರಂಗ್ ನಲ್ಲಿ ತುಳು ವಿಭಾಗದಲ್ಲಿ ಆರು ವರ್ಷ ಕಾರ್ಯಕ್ರಮ ನಿರ್ವಾಹಕನಾಗಿ ಕರ್ತವ್ಯ ನಿರ್ವಹಿಸಿದ್ದರು. ತೆಂಗು ಉತ್ಪಾದಕರ ಕಂಪೆನಿ ನಿಯಮಿತ ಇದರ ಕಡಬ ತಾಲೂಕು ನಿರ್ದೇಶಕರಾಗಿದ್ದು ಮಾಧ್ಯಮ ಕ್ಷೇತ್ರದಲ್ಲಿಯೂ ಸಕ್ರಿಯರಾಗಿದ್ದಾರೆ.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top