




ಕಡಬ ಟೈಮ್ಸ್(KADABA TIMES):ಕಡಬ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಿರು ಸೇತುವೆಯ ತಡೆಗೋಡಿಗೆ ಢಿಕ್ಕಿ ಹೊಡೆದು ಓರ್ವ ಮೃತಪಟ್ಟು, ಇಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ಹೆದ್ದಾರಿಯಲಿ ಇಂದು ನಡೆದಿದೆ.
ಚೇರು ಎಂಬಲ್ಲಿ ಈ ಘಟನೆ ನಡೆದಿದ್ದು ಸುಬ್ರಹ್ಮಣ್ಯಕ್ಕೆ ತೆರಳಿದ್ದ ರಾಮನಗರದ ಯಾತ್ರಾರ್ಥಿಗಳು ಇದ್ದ ಕಾರು ಡ್ರೈವರ್‌ನ ಕಂಟ್ರೋಲ್ ತಪ್ಪಿ ರಸ್ತೆ ಬದಿಯ ಕಿರು ಸೇತುವೆಯ ತಡೆಗೋಡಿಗೆ ಢಿಕ್ಕಿ ಹೊಡೆದಿದೆ.

ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು ಅದರಲ್ಲಿದ್ದ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತದೇಹವನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಇರಿಸಲಾಗಿದೆ. ಕಡಬ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ. ಮೃತರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.