




ಕಡಬ ಟೈಮ್ಸ್(KADABA TIMES):ಕಾರಿನಲ್ಲಿ ಬಂದ ತಂಡವೊಂದು ಯುವಕನ ಮೇಲೆ ಗುಂಡಿನ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಕೆ ಜಯನ್ (38), ವಿನೋದ್ ಆರ್ (34), ಹೆಚ್. ಎಸ್ ಮನೋಜ್ (25) ಎಂದು ಗುರುತಿಸಲಾಗಿದೆ.

ಆರೋಪಿತರಿಂದ ಕೃತ್ಯಕ್ಕೆ ಬಳಸಿದ ನಾಡ ಪಿಸ್ತೂಲು ಮತ್ತು ಎರಡು ಸಜೀವ ಗುಂಡುಗಳನ್ನು ಹಾಗೂ ಸ್ಕಾರ್ಪಿಯೋ ಕಾರನ್ನು ವಶಪಡಿಸಿಕೊಳ್ಳಲಾಗಿದೆ.