




ಕಡಬ ಟೈಮ್ಸ್(KADABA TIMES):ಕರಾವಳಿಯಲ್ಲಿ ಕೋಮು ಗಲಭೆಯ ನಡುವೆ ಮಹಾಮಾರಿ ಕೊರೊನಾ ಪಾಸಿಟಿವ್ ಪ್ರಕರಣ ಹೆಚ್ಚಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ 20 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಜೊತೆಗೆ ಮಹಾಮಾರಿ ಕೊರೊನಾಕ್ಕೆ ಒಂದು ಜೀವ ಬಲಿಯಾಗಿದೆ.
ಜಿಲ್ಲೆಯಲ್ಲಿ ಶುಕ್ರವಾರ ಶೇಕಡ 2.35 ರಷ್ಟು ಪಾಸಿಟಿವಿಟಿ ರೇಟ್ ದಾಖಲಾಗಿದೆ. 17 ಮಂದಿ ಕೊರೊನಾದಿಂದ ಗುಣಮುಖರಾಗಿದ್ದು ಪ್ರಸ್ತುತ ಜಿಲ್ಲೆಯಲ್ಲಿ 83 ಸಕ್ರೀಯ ಪ್ರಕರಣಗಳಿವೆ.

ಇದುವರೆಗೆ ಒಟ್ಟು 136217 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಇದುವರೆಗೆ ಜಿಲ್ಲೆಯಲ್ಲಿ 1854 ಜನರು ಕೊರೊನಾಕ್ಕೆ ಬಲಿಯಾಗಿದ್ದಾರೆ.