ಜಲಗಡಿ ಉಲ್ಲಂಘಿಸಿ ಮೀನುಗಾರಿಕೆ:ಭಾರತೀಯ 6 ಮೀನುಗಾರರನ್ನು ಬಂಧಿಸಿದ ಶ್ರೀಲಂಕಾದ ನೌಕಾಪಡೆ

ಜಲಗಡಿ ಉಲ್ಲಂಘಿಸಿ ಮೀನುಗಾರಿಕೆ:ಭಾರತೀಯ 6 ಮೀನುಗಾರರನ್ನು ಬಂಧಿಸಿದ ಶ್ರೀಲಂಕಾದ ನೌಕಾಪಡೆ

Kadaba Times News

ಕಡಬ ಟೈಮ್ಸ್(KADABA TIMES):ಜಲಗಡಿಯನ್ನು ಉಲ್ಲಂಘಿಸಿ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ ತಮಿಳುನಾಡಿನ 6 ಮೀನುಗಾರರನ್ನು ಶ್ರೀಲಂಕಾದ ನೌಕಾಪಡೆ ಬಂಧಿಸಿದೆ.

ಪಾಲ್ಕ್ ಬೇ ಪ್ರದೇಶದಲ್ಲಿ ಮೀನುಗಾರಿಕೆಗೆ ಬಳಸಿದ ಎರಡು ದೋಣಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಶ್ರೀಲಂಕಾ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಮುಂದಿನ ಕ್ರಮ ಜರುಗಿಸಲು ಬಂಧಿತರನ್ನು ತಲೈಮನ್ನಾರ್‌ ಪೊಲೀಸ್‌ ವಶಕ್ಕೆ ನೀಡಲಾಗಿದೆ ಎಂದು ನೌಕಾಪಡೆಯ ವಕ್ತಾರರು ಹೇಳಿದ್ದಾರೆ.ಕಳೆದ ಕೆಲವು ತಿಂಗಳಲ್ಲಿ ಭಾರತೀಯ ಮೀನುಗಾರರನ್ನು ಬಂಧಿಸಿದ್ದ ಹಲವು ಪ್ರಕರಣಗಳು ನಡೆದಿದ್ದವು.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top