ಬ್ರಹ್ಮರಕೂಟ್ಲು ರಸ್ತೆಯ ದುರವಸ್ಥೆ: ಪ್ರಧಾನಿ ಕಚೇರಿಗೆ ತಲುಪಿದ ಫೋಟೋ

ಬ್ರಹ್ಮರಕೂಟ್ಲು ರಸ್ತೆಯ ದುರವಸ್ಥೆ: ಪ್ರಧಾನಿ ಕಚೇರಿಗೆ ತಲುಪಿದ ಫೋಟೋ

Kadaba Times News

ಕಡಬ ಟೈಮ್ಸ್(KADABA TIMES):ರಾಷ್ಟ್ರೀಯ ಹೆದ್ದಾರಿ 75ರ ಟೋಲ್‌ಗೇಟ್ ಹಾದುಹೋಗುವ ಬಿ.ಸಿ.ರೋಡ್ ಸಮೀಪದ ಬ್ರಹ್ಮರಕೂಟ್ಲು ರಸ್ತೆಯ ದುರವಸ್ಥೆ ಫೋಟೋ ಈಗ ಪ್ರಧಾನಿ ಕಚೇರಿ ಹಾಗೂ ಕರ್ನಾಟಕ ಮುಖ್ಯಮಂತ್ರಿಗಳಿಗೆ ತಲುಪಿದೆ.

ಟೋಲ್‌ ಗೇಟ್ ಹಾದುಹೋಗುವ ರಸ್ತೆ ಪೂರ್ತಿ ಹೊಂಡ ಗುಂಡಿ ಬಿದ್ದು ಹಾನಿಗೀಡಾಗಿತ್ತು. ಸಮೀಪದಲ್ಲೇ ಹೆದ್ದಾರಿಯ ಟೋಲ್ ಸಂಗ್ರಹ ಕೇ೦ದ್ರವಿದ್ದರೆ, ಇದನ್ನು ಅಣಕಿಸುವಂತೆ ಡಾ೦ಬರು ಎದ್ದು ಹೋದ ರಸ್ತೆ ಇದೆ. ರಸ್ತೆ ಸರಿ ಇಲ್ಲದಿದ್ದರೂ ಅದನ್ನು ದುರಸ್ತಿಪಡಿಸುವ ಗೋಜಿಗೆ ಹೋಗದೆ ಟೋಲ್ ಸಂಗ್ರಹ ಅವ್ಯಾಹತವಾಗಿ ನಡೆಯುತ್ತಿರುವ ಸನ್ನಿವೇಶವನ್ನು ಬಿಂಬಿಸುವ ಫೋಟೋವನ್ನು ರಾಜೇಶ್ ಕೃಷ್ಣಪ್ರಸಾದ್ ಪಿಎಂಒ ಇಂಡಿಯಾ ಕಚೇರಿಯ ಪೋರ್ಟಲ್‌ಗೆ ಮೇಲ್ ಮಾಡಿದ್ದಾರೆ.ಅದಕ್ಕೆ ಸ್ವೀಕೃತಿ ಪತ್ರ ಲಭಿಸಿದೆ.

ಅದೇ ರೀತಿ ರೋಶನ್ ಕಮಾ‌ ಕುಂಬ್ಳೆ ಎಂಬವರು ಪ್ರಧಾನಿ ಕಾರ್ಯಾಲಯ ಮಾತ್ರವಲ್ಲ ಕರ್ನಾಟಕ ಮುಖ್ಯಮಂತ್ರಿಗಳಿಗೆ ಟ್ವಿಟ್ ಮೂಲಕ ಟ್ಯಾಗ್ ಮಾಡಿದ್ದಾರೆ.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top