ಬಕ್ರೀದ್ ಹಬ್ಬ ಹಿನ್ನೆಲೆ: ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರಕಾರ

ಬಕ್ರೀದ್ ಹಬ್ಬ ಹಿನ್ನೆಲೆ: ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರಕಾರ

Kadaba Times News

ಕಡಬ ಟೈಮ್ಸ್(KADABA TIMES):ರಾಜ್ಯದಲ್ಲಿ ನಾಳೆ ನಡೆಯಲಿರುವ ಬಕ್ರೀದ್ ಹಬ್ಬವನ್ನು ಶಾಂತಿ, ಸುವ್ಯವಸ್ಥೆ ಹಾಗೂ ಸಾಮರಸ್ಯದೊಂದಿಗೆ ಅಚರಿಸುವ ಕುರಿತಂತೆ ರಾಜ್ಯ ಸರಕಾರ ಕೆಲವೊಂದು ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಅವುಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಿದೆ.

  1.  ಹಬ್ಬದ ದಿನ ಸಾಮೂಹಿಕ ಪ್ರಾರ್ಥನೆ ಸಂದರ್ಭದಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಕೋವಿಡ್‌-19 ನಿಯಂತ್ರಣ ಮಾರ್ಗ ಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು.
  2. ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಾರ್ವತ್ರಿಕ ಅಧಿನಿಯಮ 2020 ರ ನಿಯಮಗಳು ಉಲ್ಲಂಘನೆಯಾಗದಂತೆ ಖುರ್ಬಾನಿಯನ್ನು ನೆರವೇರಿಸಬೇಕು.
  3. ಖುರ್ಬಾನಿಯನ್ನು ಸಾರ್ವಜನಿಕ ಪ್ರದೇಶ, ರಸ್ತೆಗಳು, ಶಾಲಾ- ಕಾಲೇಜು, ಆಸ್ಪತ್ರೆ ಆವರಣ, ಉದ್ಯಾನವನ ಹಾಗೂ ಇತರ ಸಾರ್ವಜನಿಕ ಸ್ಥಳಗಳಲ್ಲಿ ನಡೆಸುವುದನ್ನು ನಿಷೇಧಿಸಲಾಗಿದೆ.
  4. ಜಿಲ್ಲಾಡಳಿತ ಅಥವಾ ಸ್ಥಳೀಯ ಆಡಳಿತ ಸಂಸ್ಥೆಗಳು ನಿಗದಿ ಪಡಿಸಿದ ಸ್ಥಳಗಳಲ್ಲಿ ಮಾತ್ರ ಖುರ್ಬಾನಿಯನ್ನು ನೆರವೇರಿಸಬೇಕು.
  5. ಖುರ್ಬಾನಿಯನ್ನು ನೆರವೇರಿಸುವಾಗ ಶುಚಿತ್ವ ಮತ್ತು ನೈರ್ಮಲ್ಯ ಕಾಪಾಡುವುದು ಕಡ್ಡಾಯವಾಗಿದೆ.
  6. ಪ್ರಾಣಿ ತ್ಯಾಜ್ಯವನ್ನು ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ರೀತಿಯಲ್ಲಿ ಪರಿಣಾಮಕಾರಿಯಾಗಿ ವಿಲೇವಾರಿ ಮಾಡಬೇಕು.
  7. ಪೊಲೀಸ್‌, ಪಶು ಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನೀಡುವ ಸಾಮಾನ್ಯ ಹಾಗೂ ಸ್ಥಳೀಯವಾಗಿ ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸಬೇಕು.

ಇಷ್ಟೇ ಅಲ್ಲದೆ ಬಕ್ರೀದ್‌ ಆಚರಣೆ ಕುರಿತಂತೆ ರಾಜ್ಯ ಸರಕಾರ ಮತ್ತು ಜಿಲ್ಲಾಡಳಿತ ನೀಡುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸರಕಾರದ ಸುತ್ತೋಲೆ ತಿಳಿಸಿದೆ.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top