




ಕಡಬ ಟೈಮ್ಸ್(KADABA TIMES):ಕಡಬ: ಕಡಬ ಹೋಬಳಿಯ ಕಂದಾಯ ನಿರೀಕ್ಷಕ ಅವಿನ್ ಕುಮಾರ್ ರಂಗತ್ತ ಮಲೆ ಅವರನ್ನು ವರ್ಗಾವಣೆಗೊಳಿಸಿ ನೂತನ ಕಂದಾಯ ಅಧಿಕಾರಿಯನ್ನು ನಿಯೋಜಿಸಿ ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತ ದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ವರ್ಗಾಯಿಸಿ ಆದೇಶಿಸಿದೆ.
ಅವಿನ್ ಕುಮಾರ್ ರಂಗತ್ತಮಲೆ ಅವರನ್ನು ಬೆಳ್ತಂಗಡಿ ತಾಲೂಕು ಕಚೇರಿಗೆ ವರ್ಗಾಯಿಸಲಾಗಿದೆ. ನೂತನ ಕಂದಾಯ ಅಧಿಕಾರಿಯಾಗಿ ಬೆಳ್ತಂಗಡಿ ತಾಲೂಕು ಕಚೇರಿಯ ಪ್ರಥಮದರ್ಜೆ ಸಹಾಯಕ ಪೃಥ್ವಿರಾಜ್ ಅವರನ್ನು ನೇಮಿಸಿ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಹರೀಶ್ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.
ಈ ಸುದ್ದಿಯನ್ನೂ ಓದಿರಿ:ಸರಕಾರಿ ಕಛೇರಿಯಲ್ಲಿ ಫೋಟೋ, ವಿಡಿಯೋ ನಿರ್ಬಂಧ:ಮಧ್ಯಾಹ್ನ ಆದೇಶ ಹೊರಡಿಸಿ ರಾತ್ರಿ ಹಿಂಪಡೆದ ಸರಕಾರ

ಕಳೆದ ನವಂಬರ್ ೨೧ ರಂದು ಅವಿನ್ ರಂಗತ್ತಮಲೆ ಅವರನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ್ದರೂ ಈ ಆದೇಶದ ವಿರುದ್ಧ ಬೆಂಗಳೂರಿನ ಆಡಳಿತಾತ್ಮಕ ನ್ಯಾಯ ಮಂಡಳಿಗೆ ಅಪೀಲನ್ನು ಸಲ್ಲಿಸಿ ನನ್ನನ್ನು ಅವಧಿಗೆ ಮುನ್ನ ಹಾಗೂ ನನಗೆ ಬೇರೆ ಯಾವುದೇ ಕೆಲಸದ ಜಾಗವನ್ನು ತೋರಿಸದೆ ವರ್ಗಾವಣೆ ಮಾಡಿದ ಸರ್ಕಾರದ ಆದೇಶವನ್ನು ರದ್ದುಪಡಿಸುವಂತೆ ಕೋರಿ ವಕೀಲರ ಮುಖಾಂತರ ಅವಿನ್ ರಂಗತ್ತಮಲೆ ಅರ್ಜಿಯನ್ನು ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಭಕ್ತವತ್ಸಲ ಅವರಿದ್ದ ಪೀಠವು ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ನೀಡಿ ಮಧ್ಯಂತರ ಆದೇಶವನ್ನು ನ. 30ರಂದು ಹೊರಡಿಸಿರುವುದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.