




ಕಡಬ ಟೈಮ್ಸ್(KADABA TIMES):ಕಡಬ: ಬೈಕ್ – ಕಾರು ನಡುವೆ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಗಾಯಗೊಂಡ ಘಟನೆ ಕಡಬದಲ್ಲಿ ಜುಲೈ ೪ ರಂದು ಮಧ್ಯಾಹ್ನ ನಡೆದಿದೆ.
ಉಪ್ಪಿನಂಗಡಿ ಕಡೆಯಿಂದ ಕಡಬಕ್ಕೆ ಬರುತ್ತಿದ್ದ ಆಲ್ಟೋ ಕಾರಿಗೆ ವಿರುದ್ಧ ದಿಕ್ಕಿನಿಂದ ಬಂದ ಬೈಕ್ ಹೊಡೆದಿದೆ.

ಬೈಕ್ ಸವಾರ ದೇರಾಜೆ ನಿವಾಸಿಗೆ ಗಾಯವಾಗಿದ್ದು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ಕಡಬ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.