




ಕಡಬ ಟೈಮ್ಸ್(KADABA TIMES):ಕಡಬ/ಬಿಳೆನೆಲೆ: ಕೊಟ್ಟಿಗೆಯ ಕಬ್ಬಿಣದ ಪಕ್ಕಾಸು ಪೈಪ್‌ಗೆ ನೈಲಾನ್ ಹಗ್ಗದಿಂದ ನೇಣು ಬಿಗಿದುಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿಳಿನೆಲೆ ಗ್ರಾಮದಿಂದ ವರದಿಯಾಗಿದೆ.
ವಾಡ್ಯಪ್ಪ ಗೌಡ ಎಂಬವರ ಮಗ ಮೋಹನ್ ಆತ್ಮಹತ್ಯೆ ಮಾಡಿಕೊಂಡವರು. ಕೆ.ಎಫ್.ಡಿ ಸುಬ್ರಹ್ಮಣ್ಯದಲ್ಲಿ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ ಇವರು ಪ್ರತಿದಿನ ಕೆಲಸಕ್ಕೆ ಹೋಗಿ ಮನೆಗೆ ಬರುತ್ತಿದ್ದರು.

ಜುಲೈ 19ರಂದು ಮುಂಜಾನೆ ಕಾಣದೆ ಇದ್ದಾಗ ಮನೆಯವರು ಹುಡುಕಾಟ ನಡೆಸಿದ ವೇಳೆ ಮನೆಯ ಪಕ್ಕದಲ್ಲಿರುವ ಕೊಟ್ಟಿಗೆಯಲ್ಲಿ ಕಬ್ಬಿಣದ ಪಕ್ಕಾಸು ಪೈಪ್‌ಗೆ ನೈಲಾನ್ ಹಗ್ಗದಿಂದ ನೇಣು ಬಿಗಿದುಕೊಂಡಿರುವುದು ಗಮನಕ್ಕೆ ಬಂದಿದೆ.
ಮೃತರ ತಂದೆ ನೀಡಿದ ದೂರಿನಂತೆ ಕಡಬ ಪೊಲೀಸ್ ಠಾಣಾ ಯು ಡಿ ಆರ್ 23/2022 ಕಲಂ:174 ಸಿ ಆರ್ ಪಿ ಸಿ ಯಂತೆ ಪ್ರಕರಣ ದಾಖಲಾಗಿದೆ.