




ಕಡಬ ಟೈಮ್ಸ್(KADABA TIMES):ಯುವಕನೋರ್ವನನ್ನು ಆತನ ಸ್ನೇಹಿತರಿಬ್ಬರು ಸೇರಿಕೊಂಡು ಮಾರಕಾಸ್ತ್ರಗಳಿಂದ ಕೊಲೆ ನಡೆಸಿದ ಘಟನೆ ಜುಲೈ ೪ ರಂದು ಮಧ್ಯರಾತ್ರಿ ವೇಳೆ ಕೈಕಂಬದ ತಲಪಾಡಿ ಎಂಬಲ್ಲಿ ನಡೆದಿದೆ.
ಶಾಂತಿ ಅಂಗಡಿ ನಿವಾಸಿ ಮಹಮ್ಮದ್ ಆಶಿಫ್ (29) ಕೊಲೆಯಾದ ಯುವಕ. ಆತನ ಸ್ನೇಹಿತ ನೌಫಾಲ್ ಮತ್ತು ಇನ್ನೊಬ್ಬಾತ ಸೇರಿ ಕತ್ತಿಯಿಂದ ಕಡಿದು ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ತಲಪಾಡಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಹೊಟೇಲ್ ಒಂದರ ಸಮೀಪದಲ್ಲಿ ರಾತ್ರಿ ಒಂದು ಗಂಟೆಯ ವೇಳೆ ಮಾತಿಗೆ ಮಾತು ಬೆಳೆದು ಗಾಂಜಾ ವಿಚಾರದಲ್ಲಿ ಕೊಲೆ ಮಾಡಲಾಗಿದೆ ಎಂದು ಹೇಳಲಾಗಿದೆ.
ಮೂವರು ಗಾಂಜಾ ವ್ಯಸನಿಗಳು ಮತ್ತು ಮಾರಾಟಗಾರರು ಎಂಬ ಮಾತುಗಳು ಸ್ಥಳೀಯ ರಿಂದ ಹೇಳಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೋಲೀಸ್ ಇನ್ಸ್ಪೆಕ್ಟರ್ ವಿವೇಕಾನಂದ, ಎಸ್.ಐ.ಅವಿನಾಶ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.