




ಕಡಬ ಟೈಮ್ಸ್(KADABA TIMES):ಆಟವಾಡುತ್ತಿದ್ದ ಮಗು ನೀರಿನ ಹೊಂಡಕ್ಕೆ ಬಿದ್ದು 5 ವರ್ಷದ ಮಗುವೊಂದು ಮೃತಪಟ್ಟ ದಾರುಣ ಘಟನೆ ಉಡುಪಿಯ ಉಪ್ಪೂರು ಸಮೀಪದ ಕೆ.ಜಿ.ರೋಡ್ ಎಂಬಲ್ಲಿ ನಡೆದಿದೆ.
್ನಾರ್ಮನ್ ಹಾಗೂ ಸಿಲ್ವಿಯಾ ದಂಪತಿಯ ಪುತ್ರ ಲಾರೆನ್ ಲೆವಿಸ್(5) ಮೃತ ಬಾಲಕ.

ಮನೆ ಸಮೀಪ ಆಟವಾಡುತ್ತಿದ್ದ ಮಗು ನಾಪತ್ತೆಯಾಗಿತ್ತೆನ್ನಲಾಗಿದೆ. ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ. ಇಂದು ಬೆಳಗ್ಗೆ ಮನೆ ಸಮೀಪದ ನೀರಿನ ಹೊಂಡದಲ್ಲಿ ಮಗುವಿನ ಮೃತದೇಹ ಪತ್ತೆಯಾಗಿದೆ.ಆಟ ಆಡುತ್ತಿದ್ದ ಮಗು ಆಕಸ್ಮಿಕವಾಗಿ ನೀರಿನ ಹೊಂಡಕ್ಕೆ ಬಿದ್ದು ಮುಳುಗಿ ಉಸಿರುಗಟ್ಟಿ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ.
ನಾರ್ಮನ್ ಅವರ ಕುಟುಂಬ ಇತ್ತೀಚೆಗೆ ಕುವೈತ್ ನಿಂದ ರಜೆ ಹಿನ್ನೆಲೆಯಲ್ಲಿ ಊರಿಗೆ ಆಗಮಿಸಿತ್ತು .ಘಟನೆಯ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ