




ಕಡಬ ಟೈಮ್ಸ್(KADABA TIMES): ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಸಿ.ಯವರ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ಹಾಸನ ಜಿಲ್ಲೆಯ ಬೇಲೂರಿನಿಂದ ವರ್ಗಾವಣೆಗೊಂಡಿರುವ ಲೋಕೇಶ್ ಎಸ್.ಆರ್ ಜು.1ರಂದು ಆಗಮಿಸಿ, ಅಧಿಕಾರ ಸ್ವೀಕರಿಸಿದ್ದಾರೆ.
ಹಾಸನ ನಿವಾಸಿಯಾಗಿರುವ ಲೋಕೇಶ್ ಎಸ್.ಆರ್ ರವರು 1999ರಲ್ಲಿ ಮುಖ್ಯ ಶಿಕ್ಷಕರಾಗಿ ಹಾಸನ ಜಿಲ್ಲೆಯ ಹೊಳೆನರಸಿಂಹ ಪುರದಲ್ಲಿ ಶಿಕ್ಷಣ ಇಲಾಖೆಗೆ ನೇಮಕಗೊಂಡಿದ್ದರು. ಬಳಿಕ ಅವರು ಬಿ.ಆರ್.ಸಿಯಾಗಿ, ಆದರ್ಶ ವಿದ್ಯಾಲಯದ ಪ್ರಾಂಶುಪಾಲರಾಗಿ, ಹಾಸನ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿದ್ದರು.

2018ರಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಮುಂಭಡ್ತಿ ಪಡೆದು ಮಂಗಳೂರು ದಕ್ಷಿಣ ಹಾಗೂ ಹಾಸನ ಜಿಲ್ಲೆಯ ಬೇಲೂರು ಗಳಲ್ಲಿ ಕರ್ತವ್ಯ ನಿರ್ವಹಿಸಿ ಇದೀಗ ಪುತ್ತೂರಿಗೆ ವರ್ಗಾವಣೆಗೊಂಡಿದ್ದಾರೆ.