ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಸರ್ಕಾರಿ ಬಸ್ಸಿನಲ್ಲಿ ಕಾಣಿಸಿಕೊಂಡ ಹೊಗೆ: ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿತು ಭಾರೀ ಅನಾಹುತ

ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಸರ್ಕಾರಿ ಬಸ್ಸಿನಲ್ಲಿ ಕಾಣಿಸಿಕೊಂಡ ಹೊಗೆ: ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿತು ಭಾರೀ ಅನಾಹುತ

Kadaba Times News

ಕಡಬ ಟೈಮ್ಸ್(KADABA TIMES):ಸೊಮವಾರ ಪೇಟೆಯಿಂದ ಪುತ್ತೂರಿಗೆ ಬಂದು ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಬ್ಯಾಟರಿ ಸಂಪರ್ಕ ವಯರಿಂಗ್ ದೋಷದಿಂದ ಎಂಜಿನ್ ಭಾಗದಲ್ಲಿ ಹೊಗೆ ಕಾಣಿಸಿಕೊಂಡ ಮತ್ತು ತಕ್ಷಣ ಬಸ್ ಅನ್ನು ನಿಲ್ಲಿಸಿದ ಚಾಲಕನ ಸಮಯಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿದ ಘಟನೆ ಜು.6ರಂದು ಪುತ್ತೂರು ಮುಖ್ಯರಸ್ತೆಯಲ್ಲಿ  ಬಳಿ ನಡೆದಿದೆ.

ಸೋಮವಾರಪೇಟೆಯಿಂದ ಪುತ್ತೂರಿಗೆ ಬಂದು ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಪುತ್ತೂರು ಮುಖ್ಯರಸ್ತೆ  ತಲುಪುತ್ತಿದ್ದಂತೆ ಬಸ್‌ನ ಎಂಜಿನ್ ಭಾಗದಲ್ಲಿ ಸಣ್ಣಪ್ರಮಾಣದಲ್ಲಿ ಹೊಗೆ ಕಾಣಿಸಿಕೊಂಡಿತ್ತು. ತಕ್ಷಣ ಬಸ್ ಅನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ ಪರಿಶೀಲಿಸುತ್ತಿರುವ ಎಂಜಿನ್‌ನ ಬಿಸಿಗೆ ಬ್ಯಾಟರಿ ಸಂಪರ್ಕದ ವಯರಿಂಗ್ ಮೆಲ್ಟ್ ಆಗಿ ಹೊಗೆ ಬಂದಿರುವುದು ಬೆಳಕಿಗೆ ಬಂದಿತ್ತು. ಪಕ್ಕದಲ್ಲಿರುವ  ಶೋ ರೂಮ್‌ನ ಮೆಕ್ಯಾನಿಕ್  ದುರಸ್ಥಿ ಮಾಡಿದ್ದರು.ಇದೇ ವೇಳೆ ಅಗ್ನಿಶಾಮಕದಳದವರೂ ಸ್ಥಳಕ್ಕೆ ಆಗಮಿಸಿದ್ದರು.

ಪ್ರಯಾಣಿಕರಿಗೆ ಬದಲಿ ಬಸ್ ವ್ಯವಸ್ಥೆ: ಬಸ್‌ನಲ್ಲಿ ಕಂಡು ಬಂದ ತಾಂತ್ರಿಕ ದೋಷದ ಹಿನ್ನೆಲೆಯಲಿ ಪ್ರಯಾಣಿಕರನ್ನು ಬದಲಿ ಬಸ್‌ ವ್ಯವಸ್ಥೆ ಕಲ್ಪಿಸಲಾಗಿತ್ತು. ಅವರನ್ನು ಬದಲಿ ಬಸ್‌ನಲ್ಲಿ ಕಳುಹಿಸಿ ಕೊನೆಗೆ ದೋಷ ಕಂಡು ಬಂದ ಬಸ್ ಅನ್ನು ಪುತ್ತೂರು ಡಿಪೋಗೆ ಕೊಂಡೊಯ್ಯಲಾಗಿದೆ.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top