




ಕಡಬ ಟೈಮ್ಸ್(KADABA TIMES):ಸುಬ್ರಹ್ಮಣ್ಯ: ಘಟ್ಟ ಪ್ರದೇಶದಲ್ಲಿ ಹಾಗೂ ಸುಬ್ರಹ್ಮಣ್ಯ ಪರಿಸರದಲ್ಲಿ ಭಾನುವಾರ ರಾತ್ರಿಯಿಂದ ಸೋಮವಾರದವರೆಗೆ ನಿರಂತರವಾಗಿ ಸುರಿದ ಮಳೆಗೆ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಜಲಾವೃತಗೊಂಡಿದೆ.
ಮಳೆಯಿಂದಾಗಿ ಗ್ರಾಮೀಣ ಪ್ರದೇಶದಲ್ಲಿ ನದಿ ತೊರೆ, ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದೆ. ನದಿಯಲ್ಲಿ ಭಾರೀ ಪ್ರವಾಹ ಹರಿದು ಬಂದುದರಿಂದ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದ್ದು ಪ್ರವಾಹದ ಆತಂಕ ಸೃಷ್ಟಿಯಾಗಿದೆ.

ಸ್ನಾನಘಟ್ಟದಲ್ಲಿ ನಿರ್ಮಿತವಾಗಿದ್ದ ಶೌಚಾಲಯವು ಮುಳುಗಡೆಯಾಗಿದ್ದು ಮಹಿಳೆಯರ ಡ್ರೆಸ್ಸಿಂಗ್ ರೂಂ ನೀರಿನಿಂದ ಆವೃತಗೊಂಡಿದೆ . ನೀರಿನ ಮಟ್ಟ ಏರುವ ಲಕ್ಷಣಗಳಿದ್ದು ಭಕ್ತಾದಿಗಳು ನೀರಿಗಿಳಿಯದಂತೆ ನೋಡಿಕೊಳ್ಳಲಾಗುತಿದೆ. ಸ್ಥಳದಲ್ಲಿ ಗೃಹ ರಕ್ಷಕ ಸಿಬ್ಬಂದಿಗಳು, ದೇವಸ್ಥಾನದ ಭದ್ರತಾ ಸಿಬ್ಬಂದಿಗಳು ಪರಿಸ್ಥಿತಿ ನಿಭಾಯಿಸುತ್ತಿದ್ದಾರೆ.