




ಕಡಬ ಟೈಮ್ಸ್(KADABA TIMES):ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಅವರ ಮೃತ ದೇಹದ ಅಂತಿಮ ಯಾತ್ರೆಗೆ ಸಂಬಂಧಿಸಿ ಜು.27 ರಂದು ಪುತ್ತೂರಿನಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಒದಗಿಸಿದ್ದಾರೆ.
ಪ್ರವೀಣ್ ನೆಟ್ಟಾರು ಅವರ ಮೃತ ದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಗಾರದಿಂದಲೇ ಮೆರವಣಿಗೆ ಮೂಲಕ ದರ್ಬೆ ವೃತ್ತಕ್ಕೆ ಕೊಂಡು ಹೋಗಿ ಅಲ್ಲಿಂದ ಬೆಳ್ಳಾರೆ ಪ್ರವೀಣ್ ಅವರ ಮನೆಗೆ ಕೊಂಡೊಯ್ಯಲಾಗುತ್ತಿದೆ.

ಮೆರವಣಿಗೆ ಸಂದರ್ಭದ ಸಾವಿರಾರು ಮಂದಿ ಭಾಗವಹಿಸುವ ನಿರೀಕ್ಷೆ ಇದ್ದರಿಂದ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ ಎಂದು ತಿಳಿದು ಬಂದಿದೆ. ಪುತ್ತೂರು ಸರಕಾರಿ ಆಸ್ಪತ್ರೆ ಸುತ್ತ ಮತ್ತು ಶವಗಾರ ಕೊಠಡಿಗೆ ತೆರಳುವ ಕಡೆ ಪೊಲೀಸರು ಬಿಗಿ ಭದ್ರತೆ ವಹಿಸಿದ್ದಾರೆ.