




ಕಡಬ ಟೈಮ್ಸ್(KADABA TIMES):ದಕ್ಷಿಣ ಕನ್ನಡ ಜಿಲ್ಲಾಡಳಿತ ನಿಷೇಧದ ಮಧ್ಯೆಯೂ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಗಡಿ ಪ್ರದೇಶದಲ್ಲಿ ವಶಕ್ಕೆ ಪಡೆಯಲಾಗಿದೆ.
ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಕುಟುಂಬವನ್ನು ಭೇಟಿ ಮಾಡಲು ಬಂದಿದ್ದರು. ಈ ಬಗ್ಗೆ ನಿನ್ನೆಯೇ ನಮಗೆ ಮಾಹಿತಿ ಇತ್ತು. ಇಂದು ಉಡುಪಿ ಜಿಲ್ಲೆಗೆ ಆಗಮಿಸಿದ ಬಗ್ಗೆ ನಮಗೆ ಮಾಹಿತಿ ಸಿಕ್ಕ ತಕ್ಷಣ ಉಡುಪಿ ಪೊಲೀಸರ ಜೊತೆ ಸಂಪರ್ಕ ಬೆಳೆಸಿ ಹೆಜಮಾಡಿ ಚೆಕ್‌ಪೋಸ್ಟ್‌ನಲ್ಲಿ ವಶಕ್ಕೆ ಪಡೆದು ಮತ್ತೆ ಉಡುಪಿಗೆ ಬಿಟ್ಟು ಕಳುಹಿಸಲಾಗಿದೆ.

ನಿಷೇಧ ಆದೇಶ ಉಲ್ಲಂಘನೆ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಿದ್ದೇವೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹೇಳಿದ್ದಾರೆ.