




ಕಡಬ ಟೈಮ್ಸ್(KADABA TIMES):ರಾಜ್ಯ ಸರ್ಕಾರದ ಅಧೀನದ ಸರಕಾರಿ ಇಲಾಖೆ ಹಾಗೂ ಕಚೇರಿಗಳಲ್ಲಿ ಕಾರ್ಯನಿರ್ವಹಣೆ ವೇಳೆ ಸಾರ್ವಜನಿಕರು ಅನುಮತಿ ಇಲ್ಲದೆ ಫೋಟೊ ಸರ್ಕಾರಿ ಕಚೇರಿಗಳಲ್ಲಿ ಫೋಟೋ, ವಿಡಿಯೋ ಬ್ಯಾನ್ ಮಾಡಿ ಅಡಳಿತ ಸುಧಾರಣಾ ಇಲಾಖೆ ಶುಕ್ರವಾರ ಮಧ್ಯಾಹ್ನ ಹೊರಡಿಸಿದ ಆದೇಶವನ್ನು ಅದೇ ದಿನ ಮಧ್ಯರಾತ್ರಿ ಹಿಂತೆಗೆದುಕೊಂಡಿದೆ.
ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಸರಕಾರ ಈ ಆದೇಶವನ್ನು ಹಿಂಪಡೆಯುವ ನಿರ್ಧಾರಕ್ಕೆ ಬಂದಿದೆ. ಈ ಆದೇಶ ಹೊರ ಬರುತ್ತಲೇ ಸೋಷಿಯಲ್ ಮೀಡಿಯಾದಲ್ಲಿ ಮೀಮ್ಸ್ ಹಾಗೂ ಟ್ರೋಲ್ ಗಳ ಪ್ರವಾಹವೇ ಹರಿದು ಬಂದಿತ್ತು.
ಸರ್ಕಾರಿ ಕಚೇರಿಗಳಲ್ಲಿ ಫೋಟೋ, ವಿಡಿಯೋ ಬ್ಯಾನ್ ಮಾಡಿ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಭ್ರಷ್ಟಾಚಾರಿ ವಿರೋಧಿ ಹೋರಾಟಗಾರರಿಂದ ಹಾಗೂ ಸಾಮಾಜಿಕ ಕಾರ್ಯಕರ್ತರಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು.
ಸರ್ಕಾರದ ಈ ನಡೆ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದರು. ಆರ್ ಎಸ್ ಪಕ್ಷ, ಆಮ್ ಆದ್ಮಿ ಪಕ್ಷ ಸೇರಿದಂತೆ ಸಾಮಾಜಿಕ ಹೋರಾಟಗಾರರಿಂದಲೂ ಭಾರೀ ವಿರೋಧ ವ್ಯಕ್ತವಾಗಿತ್ತು.
