ಕಡಬ: ತಾಲೂಕು ಕಚೇರಿಯಲ್ಲಿ ನಾಳೆ ಜಿಲ್ಲಾಧಿಕಾರಿ ಲಭ್ಯ

ಕಡಬ: ತಾಲೂಕು ಕಚೇರಿಯಲ್ಲಿ ನಾಳೆ ಜಿಲ್ಲಾಧಿಕಾರಿ ಲಭ್ಯ

Kadaba Times News

ಕಡಬ ಟೈಮ್ಸ್(KADABA TIMES):ಕಡಬ:ಇಲ್ಲಿನ ತಾಲೂಕು ಕಚೇರಿಯಲ್ಲಿ ಜು.5ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಲಭ್ಯವಿರಲಿದ್ದಾರೆ.

ಸಾರ್ವಜನಿಕರು ತಮ್ಮ ಕೆಲಸ ಕಾರ್ಯಗಳ ಬಗ್ಗೆ ದೂರು,ಅಭಿಪ್ರಾಯಗಳನ್ನು ನೀಡಬಹುದು.ಇದರ ಸದುಪಯೋಗ ಪಡೆದುಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆ ಕಾರ್ಯಕ್ರಮದ ಮುಂದುವರಿದ ಭಾಗವಾಗಿ ಜಿಲ್ಲಾಧಿಕಾರಿಯವರು ಪ್ರತೀ ತಿಂಗಳ ಮಂಗಳವಾರ ತಾಲೂಕು ಕಚೇರಿಯಲ್ಲಿ ಲಭ್ಯರಿದ್ದು ಜನಸಾಮಾನ್ಯರ ಕುಂದುಕೊರತೆಗಳನ್ನು ಬಗೆಹರಿಸಲು ತ್ವರಿತ ಕ್ರಮ ಕೈಗೊಳ್ಳುವಂತೆ ಸರ್ಕಾರದಿಂದ ನಿರ್ದೇಶನ ನೀಡಲಾಗಿದೆ.

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top