




ಕಡಬ ಟೈಮ್ಸ್(KADABA TIMES):ಬೆಳ್ತಂಗಡಿ:ತನ್ನ ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಸವಾರ ಮೇಲೆ ಕಡವೆ ಜಿಗಿದು ದಾಳಿ ಮಾಡಿದ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.
ಈ ಘಟನೆ ಜು11 ರಂದು ನಡೆದಿದ್ದು ಬೆಳ್ತಂಗಡಿ ತಾಲೂಕಿನ ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸುಲ್ಕೇರಿಮೊಗ್ರು ಗ್ರಾಮದ ಪರಂಟ್ಯಾಲ ನಿವಾಸಿ ನಾರಾಯಣ ಪೂಜಾರಿ ಎಂಬವರು ಕಡವೆ ದಾಳಿಗೆ ಒಳಗಾಗಿ ಆಸ್ಪತ್ರೆಗೆ ದಾಖಲಾದವರು.

ಸುಲ್ಕೇರಿಮೊಗ್ರು ಪ್ರಗತಿಪರ ಕೃಷಿಕರಾಗಿರುವ ನಾರಾಯಣ ಪೂಜಾರಿಯವರು ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನಕ್ಜೆ ಬಂದು ದೇವರಿಗೆ ಪೂಜೆ ಸಲ್ಲಿಸಿ ತನ್ನ ದ್ವಿಚಕ್ರ ವಾಹನದಲ್ಲಿ ಮನೆಗೆ ಹೋಗುವಾಗ ಮಧ್ಯಾಹ್ನ ಮುಗೇರ್ ಎಂಬಲ್ಲಿ ಕಡವೆ ಇವರ ಮೇಲೆ ಜಿಗಿದಿದೆ.
.ಕೂಡಲೇ ಸ್ಥಳಿಯರ ಸಹಕಾರದಿಂದ ಗುರುವಾಯನಕೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಿಸಿ ಚಿಕಿತ್ಸೆ ನೀಡಲಾಗುತ್ತಿದೆ .ಈ ಸಂಬಂಧ ಈಗಾಗಲೇ ಅರಣ್ಯ ಇಲಾಖೆಯ ಅಧಿಕಾರಿಯವರಿಗೆ ಮಾಹಿತಿ ನೀಡಲಾಗಿದೆ ಎಂದು ತಿಳಿದು ಬಂದಿದೆ.