




ಕಡಬ ಟೈಮ್ಸ್(KADABA TIMES):ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಆಳವಾದ ಕಮರಿಗೆ ಬಿದ್ದು ಆರು ತಿಂಗಳ ಮಗು ಸಹಿತ ಇತರ ಪ್ರಯಾಣಿಕರು ಪವಾಡಸದೃಶವಾಗಿ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾದ ಘಟನೆ ಬಂಟ್ವಾಳ ಸಮೀಪ ನಡೆದಿದೆ.
ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ ವಗ್ಗ ಸಮೀಪದ ಅಂಚಿಕಟ್ಟೆ ಎಂಬಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿರುವ ಕಮರಿಗೆ ಉರುಳಿ ತಲೆಕೆಳಗಾಗಿ ಕಾರು ಬಿದ್ದಿದೆ. ಬೆಳ್ತಂಗಡಿ ತಾಲೂಕಿನ ಜಾರಿಗೆಬೈಲು ನಿವಾಸಿಗಳಾದ ಕಾರಿನ ಚಾಲಕ ಸಾಹಿಕ್, ಪ್ರಯಾಣಿಕರಾದ ಶಾಹಿನಾ ,ಪೌಜಿಯಾ ,ಸೌದ ಮತ್ತು 6 ತಿಂಗಳು ಮಗು ಅಪಾಯದಿಂದ ಪಾರಾಗಿದ್ದಾರೆ.

ಸಂಬಂಧಿಕರೋರ್ವರು ಹುಷಾರಿಲ್ಲದ ಕಾರಣ ಅವರ ಯೋಗ ಕ್ಷೇಮ ವಿಚಾರಿಸುವ ಸಲುವಾಗಿ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಸ್ಥಳಕ್ಕೆ ತುರ್ತಾಗಿ ಎಮರ್ಜೆನ್ಸಿ 112 ಪೋಲೀಸ್ ವಾಹನ ತೆರಳಿದ್ದು ಅಲ್ಲಿನ ಗಾಯಗಳನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸುವ ಕೆಲಸ ಮಾಡಿದ್ದಾರೆ.