




ಕಡಬ ಟೈಮ್ಸ್(KADABA TIMES):ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇಂದು ಕರೆದಿರುವ ಶಾಂತಿ ಸಭೆಗೆ ಮುಸ್ಲಿಂ ಸಮುದಾಯದ ಮುಖಂಡರು ಬಹಿಷ್ಕಾರ ಹಾಕಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು 11 ಗಂಟೆಗೆ ಎಲ್ಲಾ ಸಮುದಾಯದ ಮುಖಂಡರಿಗೆ ಮತ್ತು ಸಂಘಸಂಸ್ಥೆಗಳ ನಾಯಕರ ಜೊತೆ ಶಾಂತಿ ಸಭೆಗೆ ಆಹ್ವಾನ ನೀಡಲಾಗಿತ್ತು. ಆದರೆ ಮುಖ್ಯಮಂತ್ರಿ ತಾರತಮ್ಯ ನೀತಿಯನ್ನು ಖಂಡಿಸಿ ಇಂದಿನ ಸಭೆಗೆ ಬಹಿಷ್ಕಾರ ಹಾಕಲಾಗಿದೆ.
ಈ ಸುದ್ದಿಯನ್ನೂ ಓದಿ:ನಮ್ಮೂರಿನಲ್ಲಿ ಡಿ.ವಿ ಸದಾನಂದ ಗೌಡ ಅಂತ ಒಬ್ರು ಇದ್ರು, ಈಗ ಅವರು ಭೂಮಿ ಮೇಲೆ ಇದ್ದಾರಾ?-ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್

ಮುಸ್ಲಿಂ ಸೆಂಟ್ರಲ್ ಕಮಿಟಿ, ಎಸ್‌ಕೆಎಸ್‌ಎಸ್‌ಎಫ್, ಪಿಎಫ್‌ಐ, ಜಮಾತೆ ಇಸ್ಲಾಮ್ ಸೇರಿ ಹಲವು ಮುಸ್ಲಿಂ ಸಂಘಟನೆಗಳು ಬಹಿಷ್ಕಾರ ಹಾಕಿವೆ. ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಕೆ.ಅಶ್ರಫ್ ಪ್ರತಿಕ್ರಿಯಿಸಿ ಜಿಲ್ಲಾಧಿಕಾರಿಗಳ ಮೇಲೆ ನಮಗೆ ಅಪಾರ ಗೌರವಿವೆ. ಆದರೆ ರಾಜ್ಯದ ಮುಖ್ಯಮಂತ್ರಿಗಳು ಜಿಲ್ಲೆಗೆ ಬಂದ ವೇಳೆ ತಾರತಮ್ಯ ನೀತಿ ತೋರಿದ್ದಾರೆ. ಜೊತೆಗೆ ಸೌಜನ್ಯಕ್ಕಾದರೂ ಮುಸ್ಲಿಂ ಮುಖಂಡರನ್ನು ವಿಶ್ವಾಸ ತೆಗೆದುಕೊಂಡಿಲ್ಲ. ಒಂದು ವೇಳೆ ವೇಳೆ ಸಿಎಂ ಭೇಟಿ ವೇಳೆ ಶಾಂತಿ ಸಭೆ ಕರೆದಿದ್ದರೆ ನಾವು ಪಾಲ್ಗೊಳ್ಳುತ್ತಿದ್ದೆವು.
ಈ ಸಭೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಉಸ್ತುವಾರಿ ಸಚಿವ, ಮಂಗಳೂರು ನಗರ ಪೊಲೀಸ್ ಕಮೀಷನರ್, ಜಿಲ್ಲಾ ಎಸ್ಪಿ, ಜಿ.ಪ.ಸಿಇಒ ಸೇರಿ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಈ ಸಭೆಗೆ ಮಾಧ್ಯಮಗಳಿಗೆ ನಿರ್ಬಂಧ ಹೇರಿದ್ದಾರೆ.