ಬೆಳ್ಳಾರೆಯಲ್ಲಿ ನಡೆದ ಕೊಲೆ ಪ್ರಕರಣ: ಕೊಲೆಗಡುಕರಿಗೆ ಸಹಾಯ ಮಾಡಿದ ಆರೋಪದಲ್ಲಿ ಇಬ್ಬರ ಬಂಧನ: ಪ್ರಮುಖ ಆರೋಪಿಗೆ ಮುಂದುವರಿದ ಶೋಧ

ಬೆಳ್ಳಾರೆಯಲ್ಲಿ ನಡೆದ ಕೊಲೆ ಪ್ರಕರಣ: ಕೊಲೆಗಡುಕರಿಗೆ ಸಹಾಯ ಮಾಡಿದ ಆರೋಪದಲ್ಲಿ ಇಬ್ಬರ ಬಂಧನ: ಪ್ರಮುಖ ಆರೋಪಿಗೆ ಮುಂದುವರಿದ ಶೋಧ

Kadaba Times News

ಕಡಬ ಟೈಮ್ಸ್(KADABA TIMES):ಪ್ರವೀಣ್ ಹತ್ಯೆ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದ್ದು, ಸದ್ಯದಲ್ಲೇ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು ತಿಳಿದು ಬಂದಿದೆ. ಇದೇ ವೇಳೆ ಹೆಚ್ಚಿನ ವಿಚಾರಣೆಗಾಗಿ ಆರೋಪಿಗಳನ್ನು 14 ದಿನ ಕಸ್ಟಡಿಗೆ ಕೇಳಲಿದ್ದಾರೆ.

ಕೆಲವು ಸಾಕ್ಷ್ಯಾಧಾರಗಳ ಮೇಲೆ ಆರೋಪಿಗಳನ್ನು ಬಂಧಿಸಲಾಗಿದ್ದು, ಸಿಸಿಟಿವಿಯೊಂದರ ಸಾಕ್ಷಿ ಪ್ರಕಾರ ಆರೋಪಿ ಝಾಕೀರ್ ಕೊಲೆಯಾದ ಪ್ರವೀಣ್ ಅಂಗಡಿಯ ಬಳಿ 40 ನಿಮಿಷಕ್ಕೂ ಹೆಚ್ಚು ಕಾಲ ನಿಂತಿದ್ದರು.ಅದೇ ರೀತಿ ಮತ್ತೋರ್ವ ಆರೋಪಿ ಶಫಿಕ್ ಸಾಮಾಜಿಕ ಜಾಲತಾಣ ಟೆಲಿಗ್ರಾಂ ಮೂಲಕ ಕೊಲ್ಲಿ ರಾಷ್ಟ್ರದವರ ಜೊತೆ ಸಂಪರ್ಕ ಬೆಳೆಸಿದ್ದನು ಎಂದು ತಿಳಿದು ಬಂದಿದೆ.

ಈ ಸಾಕ್ಷ್ಯಗಳ ಜೊತೆ ಹಲವು ಸಾಕ್ಷಿಗಳನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ. ಜೊತೆಗೆ ಎಲ್ಲಾ ಸಾಕ್ಷಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ.ಪ್ರಾಥಮಿಕ ಮಾಹಿತಿ ಪ್ರಕಾರ ಬಂಧಿತ ಆರೋಪಿಗಳು ಕೊಲೆಯಲ್ಲಿ ನೇರವಾಗಿ ಭಾಗಿಯಾಗದಿದ್ದರೂ ಕೊಲೆಗಡುಕರಿಗೆ ಸಹಾಯ ಮಾಡಿದ್ದರು ಎಂಬ ಅಂಶ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ.

ಬೆಳ್ಳಾರೆಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ವ್ಯಾಪ್ತಿಯಲ್ಲಿ ಹಲವು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

 

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top