




ಕಡಬ ಟೈಮ್ಸ್(KADABA TIMES):ಯಕ್ಷಗಾನದ ಹಿರಿಯ ಕಲಾವಿದ, ಕನ್ನಡ-ತುಳು ಪ್ರಸಂಗಗಳ ಮನೋಜ್ಜ ಪಾತ್ರಧಾರಿ ಬೆಳ್ಳಾರೆ ವಿಶ್ವನಾಥ ರೈ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.
ಕರ್ನಾಟಕ ಮೇಳದಲ್ಲಿ ಮಂಡೆಚ್ಚ,ಅಳಿಕೆ, ಬೋಳಾರ,ಸಾಮಗ, ಮಿಜಾರು, ಪುಳಿಂಚ ಮೊದಲಾದ ಮಹಾನ್ ಚೇತನಗಳ ಒಡನಾಡಿಯಾಗಿದ್ದ ಅವರು ಅಳಿಕೆ ಯಕ್ಷನಿಧಿ, ಬೋಳಾರ ಪ್ರಶಸ್ತಿ ಇತ್ಯಾದಿಗಳನ್ನು ಪಡೆದಿರುವುದಲ್ಲದೆ ಇತ್ತೀಚೆಗಷ್ಟೇ ಕಲ್ಲಡ್ಕದಲ್ಲಿ ಪುಳಿಂಚ ರಾಮಯ್ಯ ಶೆಟ್ಟಿ ಪ್ರಶಸ್ತಿಯನ್ನೂ ಸ್ವೀಕರಿಸಿದ್ದರು.

ಯಕ್ಷಗಾನದ ಈ ಮೇರು ಕಲಾವಿದನ ನಿಧನಕ್ಕೆ ಯಕ್ಷಾಂಗಣ ಮಂಗಳೂರು ಮತ್ತು ಪುಳಿಂಚ ಪ್ರತಿಷ್ಠಾನ ಶ್ರದ್ಧಾಂಜಲಿ ಸಲ್ಲಿಸಿದೆ.