




ಕಡಬ ಟೈಮ್ಸ್(KADABA TIMES):ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಮನೆಯ ಗೋಡೆ ಕುಸಿದ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಕುಂಟಲ್ಪಲ್ಕೆಯಲ್ಲಿ ನಡೆದಿದೆ.
ಮನೆಯ ಮಾಲೀಕ ಆನಂದ ನಲಿಕೆ ಅವರ ಮನೆಯ ಗೋಡೆ ಕುಸಿದಿದ್ದು ಅಪಾರ ಹಾನಿಯಾಗಿದೆ.

ಸ್ಥಳಕ್ಕೆ ಮುಂಡಾಜೆ ಗ್ರಾಮ ಪಂಚಾಯತ್ ಸದಸ್ಯರು ಮತ್ತು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.