




ಕಡಬ ಟೈಮ್ಸ್(KADABA TIMES):ಮಂಗಳಪೇಟೆ ನಿವಾಸಿ ಫಾಝಿಲ್ ಎಂಬ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 13 ರಿಂದ 14 ಜನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫಾಝಿಲ್ ಹತ್ಯೆಗೆ ಸಂಬಂಧಿಸಿದಂತೆ ಈಗಾಗಲೇ 13 ರಿಂದ 14 ಜನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ಈ ಘಟನೆ ಬಗ್ಗೆ ಪ್ರತ್ಯಕ್ಷದರ್ಶಿಗಳನ್ನು ಕೂಡ ವಿಚಾರಣೆ ಮಾಡುತ್ತಿದ್ದು, ನಿಷ್ಪಕ್ಷಪಾತ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುತ್ತೇವೆ ಎಂದರು.
ಇನ್ನು ಮುಂಜಾಗ್ರತಾ ಕ್ರಮವಾಗಿ ಈಗಾಗಲೇ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ರಾತ್ರಿ 10 ಗಂಟೆ ನಂತರ ಸಂಚರಿಸುವ ಎಲ್ಲಾ ವಾಹನಗಳ ತಪಸಣೆ ಮಾಡಲಾಗುತ್ತಿದೆ ಎಂದಿದ್ದಾರೆ.

ಮಸೀದಿಯ ಧಪನ ಭೂಮಿಯಲ್ಲಿ ಸಿದ್ದತೆ: ಕೊಲೆಯಾದ ಫಾಜಿಲ್ ಮೃತದೇಹ ಮಂಗಳಪೇಟೆಯ ಮಸೀದಿ ಬಳಿ ತಲುಪಿದ್ದು, ಅಂತಿಮ ದರ್ಶನಕ್ಕೆ ಇರಿಸಲಾಗಿದೆ. ಮಸೀದಿ ಬಳಿ ಸಾವಿರಾರು ಅಂತಿಮ ದರ್ಶಕನಕ್ಕೆ ಸೇರಿದ್ದಾರೆ. ನಂತರ ಮಸೀದಿಯಲ್ಲಿ ಅಂತಿಮ ಪ್ರಾರ್ಥನೆ ನಡೆದು ಮಸೀದಿಯ ಧಪನ ಭೂಮಿಯಲ್ಲಿ ದಫನಕ್ಕೆ ಸಿದ್ದತೆ ಮಾಡಲಾಗಿದೆ. ಮಸೀದಿ ಬಳಿ ಭಾರೀ ಬಿಗು ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.