




ಕಡಬ ಟೈಮ್ಸ್(KADABA TIMES):ಕಾರಿನಲ್ಲಿ ಎರಡು ಗೋವುಗಳನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ ಕಳ್ಳರನ್ನು ಖಚಿತ ಮಾಹಿತಿ ಮೇರೆಗೆ ಸಿನಿಮಾ ಶೈಲಿಯಲ್ಲಿ ಪೊಲೀಸರು ವಶಕ್ಕೆ ಪಡೆದು ಬಂಧಿಸಿದ ಘಟನೆ ಕಾರ್ಕಳದಲ್ಲಿ ನಡೆದಿದೆ.
ಅಕ್ರಮ ಕಸಾಯಿ ಖಾನೆ ನಡೆಸುತ್ತಿರುವ ಸಹೋದರರಾದ ಶಕೀಲ್ ಅಹಮದ್ ಮತ್ತು ಅಖಿಲ್ ಅಹಮದ್ ಬಂಧಿತ ಆರೋಪಿಗಳು.

ರಾತ್ರಿ ವೇಳೆ ಮನೆಗಳಿಗೆ ನುಗ್ಗಿ ತಲ್ವಾರು ತೋರಿಸಿ ದನ ಕದಿಯುತ್ತಿದ್ದ ಸಹೋದರರು ಬೇಳಂಜೆ ಗ್ರಾಮದ ಈಸರಗದ್ದೆ ಎಂಬಲ್ಲಿ ರಸ್ತೆಯ ಬದಿಯಲ್ಲಿ ಮಲಗಿದ ಎರಡು ಜಾನುವಾರುಗಳನ್ನು ಕಳವು ಮಾಡಿ ಅವುಗಳನ್ನು ಕಾರಿನಲ್ಲಿ ಅವುಗಳಿಗೆ ಹಿಂಸೆಯಾಗುವ ರೀತಿಯಲ್ಲಿ ತುಂಬಿಸಿಕೊಂಡು ಸಾಗಿಸುತ್ತಿರುವಾಗ ಹೆಬ್ರಿ ಪೊಲೀಸರು ಅವರನ್ನು ಸೆರೆಹಿಡಿದಿದ್ದಾರೆ.
ಗೋವುಗಳನ್ನು ಹಿಂಸಾತ್ಮಕವಾಗಿ ಕಾರಿಗೆ ತುಂಬಿಸಿದ ಪರಿಣಾಮ ಕುತ್ತಿಗೆ ಮುರಿದು ಒಂದು ದನ ಸಾವಿಗೀಡಾಗಿತ್ತು. ಹೆಬ್ರಿ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.