




ಕಡಬ ಟೈಮ್ಸ್(KADABA TIMES): ಕಾರ್ಮಿಕರು ಉಳಿದುಕೊಂಡ ಮನೆಯ ಮೇಲೆ ಗುಡ್ಡ ಕುಸಿದ ಘಟನೆಯಲ್ಲಿ ನಾಲ್ವರು ಕಾರ್ಮಿಕರ ಪೈಕಿ ಮೂವರು ಮೃತಪಟ್ಟು, ಓರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಬಿಜು ಪಾಲಕ್ಕಾಡ್ (45), ಸಂತೋಷ್ ಆಲಕ್ಕುಯ್ಯ(46) , ಬಾಬು ಕೊಟ್ಟಾಯಂ ಮೃತ ಕಾರ್ಮಿಕರಾಗಿದ್ದು (46) ಅವರಲ್ಲಿ ಜಾನಿ ಕಣ್ಣೂರು ಎಂಬಾತನಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಪಂಜಿಕಲ್ಲು ಗ್ರಾಮದ ಮುಕ್ಕುಡ ಎಂಬಲ್ಲಿ ಹೆನ್ರಿ ಕಾರ್ಲೊ ಎಂಬವರ ಮನೆಯ ರಬ್ಬರ್ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮನೆಯ ಮೇಲೆ ನಿನ್ನೆ ರಾತ್ರಿ ಗುಡ್ಡ ಕುಸಿದು ನಾಲ್ವರು ಮನೆಯೊಳಗೆ ಸಿಲುಕಿಕೊಂಡಿದ್ದರು,ಅದರಲ್ಲಿ ಮೂವರನ್ನು ಜೆಸಿಬಿ ಮೂಲಕ ರಕ್ಷಣೆ ಮಾಡಿದರೆ ನಿನ್ನೆ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದ.
ಉಳಿದಂತೆ ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ರಾತ್ರಿ ಮೃತಪಟ್ಟ ಬಗ್ಗೆ ಮಾಹಿತಿ ಲಭ್ಯವಾಗಿದೆ.