




ಕಡಬ ಟೈಮ್ಸ್(KADABA TIMES):ಕಡಬ: ಕಾರೊಂದು ಹೊಳೆಗೆ ಬಿದ್ದಿರುವ ಘಟನೆ ಜು 9ರಂದು ರಾತ್ರಿ ಕಾಣಿಯೂರು ಬೈತಡ್ಕದಲ್ಲಿ ನಡೆದಿದ್ದು, ನೀರುಪಾಲಾಗಿರುವ ಕಾರು ಇದೀಗ ಪತ್ತೆಯಾಗಿದೆ .
ನೀರುಪಾಲಾಗಿರುವ ಕಾರನ್ನು ಅಗ್ನಿಶಾಮಕ ದಳದವರು ಹುಡುಕಾಟ ನಡೆಸಿ ಪತ್ತೆ ಹಚ್ಚಿದರೂ ಭಾರೀ ಪ್ರಮಾಣದ ನೀರು ಹರಿಯುತ್ತಿರುವ ಹಿನ್ನೆಲೆ ಕಾರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ.

ಕೊಚ್ಚ ಮತ್ತೆ ಹರಸಾಹಸ ಪಟ್ಟು ಅಗ್ನಿಶಾಮಕ ದಳದ ಸಿಬ್ಬಂದಿ ಕಾರನ್ನು ಮೇಲಕ್ಕೆತ್ತಿದ್ದಾರೆ.ಕಾರಿನಲ್ಲಿದ್ದವರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ನೀರಿನ ರಭಸಕ್ಕೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದೆ.
ಕಾರಿನಲ್ಲಿ ಇಬ್ಬರು ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ವಿಟ್ಲದ ಕುಂಡಡ್ಕ ಮೂಲದ ಧನುಷ್ ಹಾಗೂ ಮಂಜೇಶ್ವರ ಮೂಲದ ಧನುಷ್ ಎಂದು ಹೇಳಲಾಗುತ್ತಿದ್ದು, ಮೃತದೇಹ ಪತ್ತೆಯಾಗಬೇಕಿದೆ.